13ನೇ ಆವೃತ್ತಿ ಐಪಿಎಲ್ ಟೂರ್ನಿಯ 25ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ದುಬೈ(ಅ.10): ಬೆಂಗಳೂರು vs ಚೆನ್ನೈ ನಡುವಿನ ಪ್ರತಿ ಹೋರಾಟ ಅತ್ಯಂತ ರೋಚಕವಾಗಿದೆ. ಕ್ರಿಕೆಟ್ ಮಾತ್ರವಲ್ಲ, ಇತರ ಕ್ರೀಡೆಗಳಲ್ಲೂ ಇದೇ ರೋಚಕತೆ ಇದೆ. ಇದೀಗ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
RCB ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ಕ್ರಿಸ್ ಮಾರಿಸ್ ತಂಡ ಸೇರಿಕೊಂಡಿದ್ದಾರೆ. ಇನ್ನು ಗುರುಕೀರತ್ ಸಿಂಗ್ ಮಾನ್ ತಂಡ ಸೇರಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ಪಂದ್ಯದಲ್ಲಿ 3 ಗೆಲುವು ಹಾಗೂ 2 ಸೋಲಿನೊಂದಿಗೆ 6 ಅಂಕ ಸಂಪಾದಿಸಿದೆ. ಈ ಮೂಲಕ ಅಂಕಪಟ್ಟಿಲ್ಲಿ 5ನೇ ಸ್ಥಾನದಲ್ಲಿದೆ. ಇತ್ತ ಬಲಿಷ್ಠ ತಂಡ ಚೆನ್ನೈ ಸೂಪರ್ ಕಿಂಗ್ಸ್ 6ರಲ್ಲಿ 4 ಸೋಲು ಕಂಡಿದೆ. ಈ ಮೂಲಕ 6ನೇ ಸ್ಥಾನದಲ್ಲಿದೆ.
