ದುಬೈ(ಅ.05) : 13ನೇ ಆವೃತ್ತಿ ಐಪಿಎಲ್ ಟೂರ್ನಿಯ 19ನೇ ಲೀಗ್ ಪಂದ್ಯದಲ್ಲಿ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ

ಆ್ಯಡಮ್ ಜಂಪಾ ಬದಲು ಆಲ್ರೌಂಡರ್ ಮೊಯಿನ್ ಆಲಿ ತಂಡ ಸೇರಿಕೊಂಡಿದ್ದಾರೆ. ಇನ್ನು ಗುರುಕೀರತ್ ಸಿಂಗ್ ಮಾನ್ ಬದಲು ವೇಗಿ ಮೊಹಮ್ಮದ್ ಸಿರಾಜ್ ತಂಡ ಸೇರಿಕೊಂಡಿದ್ದಾರೆ. ಡೆಲ್ಲಿ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಇಂಜುರಿಯಾಗಿ ಟೂರ್ನಿಯಿಂದಲೇ ಹೊರಬಿದ್ದಿರುವ ಹಿರಿಯ ಸ್ಪಿನ್ನರ್ ಅಮಿತ್ ಮಿಶ್ರಾ ಬದಲು, ಅಕ್ಸರ್ ಪಟೇಲ್ ತಂಡ ಸೇರಿಕೊಂಡಿದ್ದಾರೆ.

ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 2ನೇ ಸ್ಥಾನದಲ್ಲಿದ್ದರೆ, ರಾಯಾಲ್ ಚಾಲೆಂಜರ್ಸ್ ಬೆಂಗಳೂರು ತಂಡ 3ನೇ ಸ್ಥಾನದಲ್ಲಿದೆ. ಉಭಯ ತಂಡಗಳು ಆಡಿದ 4 ಪಂದ್ಯದಲ್ಲಿ 3ರಲ್ಲಿ ಗೆಲುವು ದಾಖಲಿಸಿದೆ. ಎರಡೂ ತಂಡಗಳು 6 ಅಂಕಪಡೆದಿದ್ದರೂ ನೆಟ್ ರನ್‌ರೇಟ್ ಆಧಾರದ ಮೇಲೆ ಡೆಲ್ಲಿ 2ನೇ ಸ್ಥಾನದಲ್ಲಿದೆ.