ಶಾರ್ಜಾ(ಅ.17): 13ನೇ ಆವೃತ್ತಿ ಐಪಿಎಲ್ ಟೂರ್ನಿಯಲ್ಲಿ 3ನೇ ಶತಕ ದಾಖಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಬ್ಯಾಟ್ಸ್‌ಮನ್ ಶಿಖರ್ ಧವನ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ.

ಐಪಿಎಲ್ ಟೂರ್ನಿಯಲ್ಲಿ ಶಿಖರ್ ಧವನ್ ಚೊಚ್ಚಲ ಸೆಂಚುರಿ ಸಿಡಿಸಿದ್ದಾರೆ. ಇದಕ್ಕೂ ಮೊದಲು ಧವನ್ ಗರಿಷ್ಠ ರನ್ ಅಜೇಯ 97. ಇದೀಗ ಆಕರ್ಷಕ ಶತಕ ದಾಖಲಿಸಿ ಸಂಭ್ರಮಿಸಿದ್ದಾರೆ.