Asianet Suvarna News Asianet Suvarna News

IPL 2020: ಸನ್‌ರೈಸರ್ಸ್-ಸಿಎಸ್‌ಕೆ ನಡುವೆ ಬಿಗ್ ಫೈಟ್

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 29ನೇ ಪಂದ್ಯದಲ್ಲಿಂದು ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

IPL 2020 SRH takes on CSK in Dubai match Preview kvn
Author
Dubai - United Arab Emirates, First Published Oct 13, 2020, 12:09 PM IST
  • Facebook
  • Twitter
  • Whatsapp

ದುಬೈ(ಅ.13): ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಜಯಕ್ಕಾಗಿ ಹಾತೊರೆಯುತ್ತಿರುವ ಸನ್ ರೈಸರ್ಸ್ ಹೈದ್ರಾಬಾದ್ ತಂಡಗಳು ಇಲ್ಲಿ ಮಂಗಳವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಎದುರಾಗಲಿವೆ. 

ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಗೆದ್ದಿದ್ದ 3 ಬಾರಿ ಚಾಂಪಿಯನ್ ಹಾಗೂ ಕಳೆದ ಬಾರಿಯ ರನ್ನರ್ ಅಪ್ ಚೆನ್ನೈ 7 ಪಂದ್ಯಗಳಲ್ಲಿ 5ರಲ್ಲಿ ಸೋತಿದೆ. ಆರಂಭಿಕ ವಾಟ್ಸನ್, ಡುಪ್ಲೆಸಿ ಲಯದಲ್ಲಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ರಾಯುಡು, ಧೋನಿ, ಕರ್ರನ್, ಜಡೇಜಾ, ಬ್ರಾವೋ ಸ್ಥಿರ ಪ್ರದರ್ಶನ ನೀಡಬೇಕಿದೆ. ಇನ್ನು ಹೈದ್ರಾಬಾದ್ 3ರಲ್ಲಿ ಗೆದ್ದು 4ರಲ್ಲಿ ಸೋತಿದೆ. 6 ಅಂಕಗಳಿಂದ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಹೈದ್ರಾಬಾದ್ ಬ್ಯಾಟಿಂಗ್ ನಲ್ಲಿ ಸ್ಥಿರ ಪ್ರದರ್ಶನ ನೀಡಬೇಕಿದೆ.

KKR ವಿರುದ್ಧ RCBಗೆ ಭರ್ಜರಿ ಗೆಲುವು, 3ನೇ ಸ್ಥಾನಕ್ಕೆ ಲಗ್ಗೆ ಇಟ್ಟ ಕೊಹ್ಲಿ ಬಾಯ್ಸ್!

ಪಿಚ್ ರಿಪೋರ್ಟ್: ದುಬೈ ಪಿಚ್ ಸ್ಪರ್ಧಾತ್ಮಕವಾಗಿದ್ದು, ಸಮತೋಲದಿಂದ ಕೂಡಿದೆ. ಬ್ಯಾಟ್ಸ್‌ಮನ್‌ಗಳು ಹಾಗೂ ಬೌಲರ್‌ಗಳಿಗೆ ನೆರವಾಗಲಿದೆ. ಸಮಯ ಕಳೆದಂತೆ ಸ್ಪಿನ್ನರ್‌ಗಳು ಯಶಸ್ಸು ಕಾಣಲಿದ್ದಾರೆ. 180 ರಿಂದ 190 ಸುರಕ್ಷಿತ ಮೊತ್ತ ಎನ್ನಲಾಗಿದೆ.

ಹೈದರಾಬಾದ್ ತಂಡ: ಡೇವಿಡ್ ವಾರ್ನರ್ (ನಾಯಕ), ಬೇರ್ ಸ್ಟೋವ್, ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್, ಪ್ರಿಯಂ ಗರ್ಗ್, ವಿಜಯ್ ಶಂಕರ್, ಅಭಿಷೇಕ್ ಶರ್ಮಾ, ರಶೀದ್ ಖಾನ್, ಸಂದೀಪ್ ಶರ್ಮಾ, ಖಲೀಲ್ ಅಹಮ್ಮದ್, ಟಿ ನಟರಾಜನ್

ಚೆನ್ನೈ: ಶೇನ್ ವಾಟ್ಸನ್, ಫಾಫ್ ಡುಪ್ಲೆಸಿ, ಅಂಬಟಿ ರಾಯುಡು, ಜೆ. ಜಗದೀಸನ್, ಎಂ. ಎಸ್. ಧೋನಿ (ನಾಯಕ), ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಕರಣ್ ಶರ್ಮಾ
 

Follow Us:
Download App:
  • android
  • ios