ದುಬೈ(ಅ.11): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ 26ನೇ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ನಿರೀಕ್ಷೆಯಂತೆಯೇ ಬೆನ್ ಸ್ಟೋಕ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು ಕೂಡಿಕೊಂಡಿದ್ದು, ಸ್ಮಿತ್ ಪಡೆಗೆ ಮಧ್ಯಮ ಕ್ರಮಾಂಕದಲ್ಲಿ ಮತ್ತಷ್ಟು ಬಲ ಬಂದಂತೆ ಆಗಿದೆ. ಮತ್ತೆ ರಾಜಸ್ಥಾನ ತಂಡದಲ್ಲಿ ಮತ್ತಷ್ಟು ಬದಲಾವಣೆ ಮಾಡಲಾಗಿದ್ದು, ರಯಾನ್ ಪರಾಗ್ ಹಾಗೂ ರಾಬಿನ್ ಉತ್ತಪ್ಪ, ಜಯದೇವ್ ಉನಾದ್ಕಟ್ ತಂಡ ಕೂಡಿಕೊಂಡಿದ್ದಾರೆ ಇನ್ನುಳಿದಂತೆ ಸನ್‌ರೈಸರ್ಸ್ ಹೈದರಾಬಾದ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅಬ್ದುಲ್ ಸಮದ್ ಬದಲಿಗೆ ವಿಜಯ್ ಶಂಕರ್ ತಂಡ ಕೂಡಿಕೊಂಡಿದ್ದಾರೆ.

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಆಡಿದ 6 ಪಂದ್ಯಗಳಲ್ಲಿ 2 ಗೆಲುವು ಹಾಗೂ 4 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದ್ದರೆ, ಡೇವಿಡ್ ವಾರ್ನರ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡ ತಲಾ 3 ಗೆಲುವು ಹಾಗೂ 3  ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. 

 

ತಂಡಗಳು ಹೀಗಿವೆ:

ಸನ್‌ರೈಸರ್ಸ್ ಹೈದರಾಬಾದ್:

ರಾಜಸ್ಥಾನ ರಾಯಲ್ಸ್: