ದುಬೈ(ಅ.08): 13ನೇ ಆವೃತ್ತಿ ಐಪಿಎಲ್ ಟೂರ್ನಿಯ 21ನೇ ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗುತ್ತಿದೆ. ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹೈದರಾಬಾದ್ ತಂಡ ಒಂದು ಬದಲಾವಣೆ ಮಾಡಿದೆ. ವೇಗಿ ಖಲೀಲ್ ಅಹಮ್ಮದ್ ಬದಲು ಸಿದ್ದಾರ್ಥ್ ಕೌಲ್ ತಂಡ ಸೇರಿಕೊಂಡಿದ್ದಾರೆ.

ಪಂಜಾಬ್ ತಂಡದಲ್ಲಿ 3 ಬದಲಾವಣೆ ಮಾಡಲಾಗಿದೆ. ಪ್ರಭಾಸಿಮ್ರನ್ ಸಿಂಗ್, ಅರ್ಶದೀಪ್ ಹಾಗೂ ಮುಜೀಪ್ ಯಆರ್ ರಹಮಾನ  ತಂಡ ಸೇರಿಕೊಂಡಿದ್ದಾರೆ.

ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲುವು ಮಾತ್ರ ಕಾಣುತ್ತಿಲ್ಲ. 200 ರನ್ ಸಿಡಿಸಿದರೂ ಬೌಲಿಂಗ್‌ನಲ್ಲಿ ದುಬಾರಿಯಾಗುತ್ತಿದೆ. ಹೀಗಾಗಿ 5 ಪಂದ್ಯದಲ್ಲಿ ಕೇವಲ 1 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇತ್ತ ಹೈದರಾಬಾದ್ ತಂಡ 2 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.