ಅಬು ಧಾಬಿ(ನ.06);  ಗೆಲುವು ಬೇಕೆ ಬೇಕು, ಸಣ್ಣ ತಪ್ಪು ಸಂಭವಿಸಿದರೆ ಟೂರ್ನಿಯಿಂದ ಹೊರಬೀಳುವ ಆತಂಕ. ಹೀಗಾಗಿ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಜಿದ್ದಾಜಿದ್ದಿನ ಹೋರಾಟ ನಡೆಸಲಿದೆ. ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ SRH ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 4 ಪಂದ್ಯ ಸೋತು ಪ್ಲೇ ಆಫ್‌ಗೆ ಎಂಟ್ರಿಕೊಟ್ಟಿದೆ. ಲೀಗ್ ಹಂತದ ಆರಂಭಿಕ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮಣಿಸಿದ್ದ ಬೆಂಗಳೂರು, 2ನೇ ಮುಖಾಮುಖಿಯಲ್ಲಿ ಮುಗ್ಗರಿಸಿತ್ತು. ಅತ್ತ ಹೈದರಾಬಾದ್ ತಂಡ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿದೆ.