ಅಬು ಧಾಬಿ(ಅ.19): ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್.ಧೋನಿಗೆ ಇದು 200ನೇ ಐಪಿಎಲ್ ಪಂದ್ಯವಾಗಿದೆ. ಐಪಿಎಲ್ ಟೂರ್ನಿಯಲ್ಲಿ 200 ಪಂದ್ಯವಾಡಿದ ಮೊದಲ ಹಾಗೂ ಏಕೈಕ ಆಟಗಾರ ಅನ್ನೋ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. 200ನೇ ಪಂದ್ಯದಲ್ಲಿ ಧೋನಿ ಟಾಸ್ ಗೆದ್ದಿದ್ದಾರೆ. ಇಷ್ಟೇ ಅಲ್ಲ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

13ನೇ ಆವೃತ್ತಿ ಐಪಿಎಲ್ ಟೂರ್ನಿಯ 37ನೇ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ  ರಾಜಸ್ಥಾನ ರಾಯಲ್ಸ್ ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಎಂ.ಎಸ್.ಧೋನಿ ಪಾಲಿಗೆ 200ನೇ ಪಂದ್ಯವಾಗಿದೆ. ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ಪರ ಧೋನಿ ಕಣಕ್ಕಿಳಿದಿದ್ದಾರೆ.

"