13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿನ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ರಾಹುಲ್ ತೆವಾಟಿಯಾ ಬ್ಯಾಟಿಂಗ್ ನೆಟ್ಟಿಗರ ಮನ ಗೆದ್ದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಶಾರ್ಜಾ(ಸೆ.28): ಮಳೆ ನಿಂತರೂ ಮಳೆ ಹನಿ ನಿಲ್ಲಲ್ಲ ಎನ್ನುವ ಮಾತೊಂದಿದೆ. ಅದರಂತೆ ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ನಡುವಿನ ಪಂದ್ಯ ಮುಗಿದರೂ ಆ ಪಂದ್ಯ ಬಗ್ಗೆ ಮಾತಾನಾಡುವುದು ಮಾತ್ರ ನಿಂತಿಲ್ಲ. 

ಹೌದು, ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ ದಾಖಲೆಯ ಮೊತ್ತವನ್ನು ಬೆನ್ನಟ್ಟಿ ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದೆ. ಅದರಲ್ಲೂ ರಾಜಸ್ಥಾನದ ಆಲ್ರೌಂಡರ್ ರಾಹುಲ್ ತೆವಾಟಿಯಾ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿ ಕೊನೆಯಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿ ಬಿಟ್ಟರು. 18ನೇ ಓವರ್ ಬೌಲಿಂಗ್ ಮಾಡಿದ ಕಿಂಗ್ಸ್ ಇಲೆವನ್ ಪಂಜಾಬ್ ವೇಗಿ ಶೆಲ್ಡನ್ ಕಾಟ್ರೆಲ್ ಅವರಿಗೆ ತೆವಾಟಿಯಾ ಬರೋಬ್ಬರಿ 5 ಸಿಕ್ಸರ್ ಸಿಡಿಸಿ ಮಿಂಚಿದರು. ಈ ಇನಿಂಗ್ಸ್ ನೋಡಿ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿರುವ ಯುವರಾಜ್ ಸಿಂಗ್ ಒಂದು ಬಾಲ್ ಮಿಸ್ ಮಾಡಿಕೊಂಡಿದ್ದಕ್ಕೆ ಥ್ಯಾಂಕ್ಸ್ ಎಂದಿದ್ದಾರೆ

Scroll to load tweet…

ಆರಂಭದಲ್ಲಿ ರನ್‌ ಗಳಿಸಲು ತೆವಾಟಿಯಾ ಅಕ್ಷರಶಃ ಪರದಾಡಿದರು. ಮೊದಲ 19 ಎಸೆತಗಳಲ್ಲಿ ತೆವಾಟಿಯಾ ಕೇವಲ 8 ರನ್‌ಗಳನ್ನಷ್ಟೇ ಗಳಿಸಿದ್ದರು. ಆದರೆ ಅಂತಿಮವಾಗಿ ರಾಜಸ್ಥಾನ ರಾಯಲ್ಸ್ ಇನ್ನೂ 3 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ತೆವಾಟಿಯಾ 31 ಎಸೆತಗಳಲ್ಲಿ 53 ರನ್ ಬಾರಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿ ವಿಕೆಟ್ ಒಪ್ಪಿಸಿದರು.

ರಾಜಸ್ಥಾನಕ್ಕೆ ದಾಖಲೆಯ ಗೆಲುವು ತಂದು ಕೊಟ್ಟ ತೆವಾಟಿಯಾ ಹಳೆಯ ಟ್ವೀಟ್‌ಗಳೀಗ ಸಿಕ್ಕಾಪಟ್ಟೆ ವೈರಲ್..!

ತೆವಾಟಿಯಾ ಬ್ಯಾಟಿಂಗ್ ನೋಡಿದ ನೆಟ್ಟಿಗರು ಧೋನಿಯಂತೆ ಮಂದಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿ ಯುವಿಯಂತೆ ವೇಗವಾಗಿ ಮ್ಯಾಚ್ ಫಿನಿಶ್ ಮಾಡಿದರು ಎಂದು ಕೊಂಡಾಡಿದ್ದಾರೆ. 

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…