Asianet Suvarna News Asianet Suvarna News

ಪಂಜಾಬ್ ವಿರುದ್ಧ ಮಹತ್ವದ ಮೈಲಿಗಲ್ಲು ನಿರ್ಮಿಸಲು ಸಜ್ಜಾದ ಕೊಹ್ಲಿ, ಎಬಿಡಿ!

  • ದಾಖಲೆ ಬರೆಯಲು ಸಜ್ಜಾದ ಕೊಹ್ಲಿ ಹಾಗೂ ಎಬಿಡಿ
  • ಪಂಜಾಬ್ ವಿರುದ್ಧ ಮೈಲಿಗಲ್ಲು ಸ್ಥಾಪಿಸಲು ಸಜ್ಜಾದ ಕೊಹ್ಲಿ, ಎಬಿಡಿ
     
Virat Kohli AB de Villiers could go on to achieve new milestones in RCB vs KXIP IPL 2020 ckm
Author
Bengaluru, First Published Oct 15, 2020, 6:19 PM IST
  • Facebook
  • Twitter
  • Whatsapp

ಶಾರ್ಜಾ(ಅ.15): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಹೋರಾಟ ಕೆಲ ಹೊತ್ತಲ್ಲೇ ಆರಂಭಗೊಳ್ಳಲಿದೆ. ಕೊಹ್ಲಿ ಪಡೆ ಗೆಲುವಿನ ಅಲೆಯಲ್ಲಿದ್ದರೆ, ಇತ್ತ ಪಂಜಾಬ್ ಸೋಲಿನ ಸುಳಿಯಲ್ಲಿದೆ. ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಅಬ್ಬರಿಸಲು ಸಜ್ಜಾಗಿರುವ ಆರ್‌ಸಿಬಿ ದಾಖಲೆಯ ಗೆಲುವನ್ನು ಎದುರು ನೋಡುತ್ತಿದೆ. ಇಷ್ಟೇ ಅಲ್ಲ ಈ ಪಂದ್ಯದಲ್ಲಿ ಕೊಹ್ಲಿ ಹಾಗೂ ಎಬಿಡಿ ಮತ್ತೊಂದು ದಾಖಲೆ ಬರೆಯಲು ತುದಿಗಾಲಲ್ಲಿ ನಿಂತಿದ್ದಾರೆ

ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟ RCB;ಸೋತರೆ ಪ್ಲೇ-ಆಫ್‌ ರೇಸ್‌ನಿಂದ KXIP ಔಟ್?.

ಕೆಕೆಆರ್ ವಿರುದ್ಧ ಪಂದ್ಯದಲ್ಲಿ ಕೊಹ್ಲಿ ಹಾಗೂ ಎಬಿ ಡಿವಿಲಿಯರ್ಸ್ ಶತಕದ ಜೊತೆಯಾಟ ಆಡಿ ದಾಖಲೆ ಬರೆದಿದ್ದಾರೆ. ಇದೀಗ ಪಂಜಾಬ್ ವಿರುದ್ಧ ವಿರಾಟ್ ಕೊಹ್ಲಿ 6 ಬೌಂಡರಿ ಸಿಡಿಸಿದರೆ, ಐಪಿಎಲ್ ಟೂರ್ನಿಯಲ್ಲಿ ಒಟ್ಟು 500 ಬೌಂಡರಿ ಸಿಡಿಸಿದ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ. ಇನ್ನು 3 ಸಿಕ್ಸರ್ ಸಿಡಿಸಿ ಅಬ್ಬರಿಸಿದರೆ ಐಪಿಎಲ್ ಟೂರ್ನಿಯಲ್ಲಿ ಒಟ್ಟು 200 ಸಿಕ್ಸರ್ ಪೂರೈಸಿದ ಕ್ರಿಕೆಟಿಗ ಅನ್ನೋ ಹಿರಿಮೆಗೆ ಪಾತ್ರರಾಗಲಿದ್ದಾರೆ.

ಕಳೆದ ಪಂದ್ಯದಲ್ಲಿ 33 ಎಸೆತದಲ್ಲಿ 73 ರನ್ ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಎಬಿ ಡಿವಿಲಿಯರ್ಸ್ ಇದೀಗ ರಾಯಲ್ ಚಾಲೆಂಜರ್ಸ್ ಪರ ಮಹತ್ವದ ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದ್ದಾರೆ. ಎಬಿಡಿ ಪಂಜಾಬ್ ವಿರುದ್ಧ 48 ರನ್ ಸಿಡಿಸಿದರೆ ಆರ್‌ಸಿಬಿ ಪರ 4,000 ರನ್ ಪೂರೈಸಿದ ಬ್ಯಾಟ್ಸ್‌ಮನ್ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಎಬಿ ಡಿವಿಲಿಯರ್ಸ್ ಪಂಜಾಬ್ ವಿರುದ್ಧ 3 ಕ್ಯಾಚ್ ಹಿಡಿದಲ್ಲಿ, ಲೀಗ್ ಟೂರ್ನಿಯಲ್ಲಿ 100 ಕ್ಯಾಚ್ ಹಿಡಿದ ಸಾಧನೆ ಮಾಡಲಿದ್ದಾರೆ. ಪಂಜಾಬ್ ಸತತ ವೈಫಲ್ಯದಿಂದ ಕಳೆಗುಂದಿದೆ. ಆದರೆ ಈ ಹಿಂದಿನ ಮುಖಾಮುಖಿಯಲ್ಲಿ ಪಂಜಾಬ್ ವಿರುದ್ಧ ಆರ್‌ಸಿಬಿ ಮುಗ್ಗರಿಸಿತ್ತು.
 

Follow Us:
Download App:
  • android
  • ios