7ನೇ ಆವೃತ್ತಿಯ ಇಂಡಿಯನ್ ಸೂಪರ್ ಲೀಗ್‌ ನಿರ್ಣಾಯಕ ಘಟ್ಟ ತಲುಪಿದ್ದು, ಪ್ರಶಸ್ತಿಗಾಗಿ ಬಲಿಷ್ಠ ತಂಡಗಳಾದ ಮುಂಬೈ ಸಿಟಿ ಎಫ್‌ಸಿ ಹಾಗೂ ಎಟಿಕೆ ಮೋಹನ್‌ ಬಗಾನ್‌ ತಂಡಗಳು ಸೆಣಸಲಿವೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಮಾರ್ಗೋ(ಮಾ.13): ಇಂಡಿಯನ್‌ ಸೂಪರ್‌ ಲೀಗ್‌ (ಐಎಸ್‌ಎಲ್‌) 7ನೇ ಆವೃತ್ತಿಯ ಫೈನಲ್‌ ಪಂದ್ಯ ಶನಿವಾರ ನಡೆಯಲಿದ್ದು, ಬಲಿಷ್ಠ ತಂಡಗಳಾದ ಮುಂಬೈ ಸಿಟಿ ಎಫ್‌ಸಿ ಹಾಗೂ ಎಟಿಕೆ ಮೋಹನ್‌ ಬಗಾನ್‌ ತಂಡಗಳು ಸೆಣಸಲಿವೆ. 

ಸೆಮಿಫೈನಲ್‌ನಲ್ಲಿ ಮುಂಬೈ ತಂಡ ಗೋವಾ ಎಫ್‌ಸಿ ವಿರುದ್ಧ ಜಯಿಸಿದರೆ, ಮೋಹನ್‌ ಬಗಾನ್‌ ತಂಡ ನಾಥ್‌ರ್‍ಈಸ್ಟ್‌ ಯುನೈಟೆಡ್‌ ವಿರುದ್ಧ ಗೆದ್ದು ಫೈನಲ್‌ಗೇರಿದೆ. ಮುಂಬೈ ಇದೇ ಮೊದಲ ಬಾರಿಗೆ ಫೈನಲ್‌ನಲ್ಲಿ ಆಡುತ್ತಿದ್ದು, ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿರಿಸಿದೆ. 

ISL: ಪೆನಾಲ್ಟಿ ಶೂಟೌಟ್: ಗೋವಾ ಔಟ್, ಫೈನಲ್ ತಲುಪಿದ ಮುಂಬೈ

Scroll to load tweet…
Scroll to load tweet…

ಲೀಗ್‌ ಹಂತದಲ್ಲಿ 2 ಬಾರಿ ಮುಖಾಮುಖಿಯಾದಾಗಲೂ ಎಟಿಕೆ ವಿರುದ್ಧ ಮುಂಬೈ ಜಯಗಳಿಸಿತ್ತು. ಅದೇ ಲಯವನ್ನು ಮುಂದುವರಿಸುವ ವಿಶ್ವಾಸದಲ್ಲಿದೆ. 3 ಬಾರಿ ಚಾಂಪಿಯನ್‌ ಆಗಿರುವ ಎಟಿಕೆ, ಸತತ 2ನೇ ಬಾರಿಗೆ ಟ್ರೋಫಿ ಗೆಲ್ಲಲು ಹಾತೊರೆಯುತ್ತಿದೆ.

ಪಂದ್ಯ: ಸಂಜೆ 7.30ಕ್ಕೆ,
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌