ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಜಾರಿ ಯಾವಾಗ? ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವ ಹೇಳಿದ್ದೇನು?
ಪುಣೆ, [ಜ.20]: ಕೇಂದ್ರದ ಮಹತ್ವಾಕಾಂಕ್ಷಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿ ಯೋಜನೆಯನ್ನು ಈಗಾಗಲೇ ಕೆಲ ರಾಜ್ಯಗಳಲ್ಲಿ ಜಾರಿಯಾಗಿದೆ.
ಇನ್ನುಳಿದ ರಾಜ್ಯಗಳಲ್ಲಿ ಯಾವಾಗ ಜಾರಿಗೆ ಬರಲಿದೆ ಎನ್ನುವುದಕ್ಕೆ ಪುಣೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್, ಮುಂಬರುವ ಶೈಕ್ಷಣಿಕ ವರ್ಷದಿಂದಲೇ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾನಿಲಯಗಳು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಶೇ. 10 ಮೀಸಲಾತಿಯನ್ನು ಕಾರ್ಯಗತಗೊಳಿಸಬೇಕು ಎಂದರು.
ಮೇಲ್ವರ್ಗ ಮೀಸಲಾತಿ ಪಡೆಯಲು 3 ಮಾನದಂಡಗಳು, ಯಾರಿಗೆ ಲಾಭ? ಇಲ್ಲಿದೆ ಮಾಹಿತಿ
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ಜಾರಿ ಮಾಡಿದೆ. ಈ ಮೀಲಾತಿಯನ್ನು ಮುಂಬರುವ ಶೈಕ್ಷಣಿಕ ವರ್ಷದಿಂದಲೇ ಎಲ್ಲಾ ರಾಜ್ಯಗಳೂ ಕಾರ್ಯಗತಗೊಳಿಸುವಂತೆ ಅಧಿಸೂಚನೆ ಹೊರಡಿಸಿದ್ದೇವೆ ಎಂದು ಹೇಳಿದರು.
ಗುಜರಾತಲ್ಲಿ ಇಂದಿನಿಂದ ಮೇಲ್ವರ್ಗ ಮೀಸಲಾತಿ ಜಾರಿ
ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯನ್ನು ಉದ್ಯೋಗಾವಕಾಶದಲ್ಲಿ ಈಗಾಗಲೇ ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳು ಕಾರ್ಯಗತಗೊಳಿಸಿವೆ.

Last Updated 20, Jan 2019, 5:40 PM IST