ನವದೆಹಲಿ[ಜ.06]: ಪೆಟ್ರೋಲ್‌ ಮತ್ತು ಡೀಸೆಲ್‌ ತೆರಿಗೆ ಏರಿಕೆ ಮಾಡಿದ ಕರ್ನಾಟಕದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಕಿಡಿಕಾರಿದ್ದಾರೆ.

ಭ್ರಷ್ಟಾಚಾರ ಮತ್ತು ಅದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರ ಸಾರ್ವಜನಿಕರ ಮೇಲೆ ಹೆಚ್ಚುವರಿ ತೆರಿಗೆ ಏಕೆ ವಿಧಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಶಾ, ‘ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರದ ಅವಧಿಯಲ್ಲಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ದಲಿತರನ್ನು ಗುಲಾಮರಾಗಿದ್ದಾರೆ. ಇನ್ನು ಸಾರ್ವಜನಿಕರು ಹೆಚ್ಚುವರಿ ತೆರಿಗೆಯಿಂದ ಬೆಂಡಾಗಿದ್ದಾರೆ. ಇಂಥ ಸಂದರ್ಭದಲ್ಲಿ ಅದಕ್ಷತೆ ಮತ್ತು ಭ್ರಷ್ಟಾಚಾರದ ಸರ್ಕಾರಕ್ಕೆ ಸಾರ್ವಜನಿಕರು ಏಕೆ ಹೆಚ್ಚುವರಿ ತೆರಿಗೆ ಕಟ್ಟಬೇಕು’ ಎಂದು ಪ್ರಶ್ನಿಸಿದ್ದಾರೆ.