ಬೆಂಗಳೂರು(ಸೆ.12): ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,794 ವೈದ್ಯರು, ತಜ್ಞ ವೈದ್ಯರು ಹಾಗೂ ವೈದ್ಯಾಧಿಕಾರಿಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದೆ. 

ಆರೋಗ್ಯ ಇಲಾಖೆಯು ಕೊರೋನಾ ನಿಯಂತ್ರಣಕ್ಕೆ ಸಿಬ್ಬಂದಿ ಕೊರತೆ ಉಂಟಾಗದಂತೆ ಹಿರಿಯ ವೈದ್ಯಾಧಿಕಾರಿಗಳು, ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಮತ್ತು ದಂತ ವೈದ್ಯಾಧಿಕಾರಿಗಳ ಖಾಲಿ ಹುದ್ದೆಗಳು ಮತ್ತು ಬ್ಯಾಕ್‌ಲಾಗ್‌ ಬಾಕಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ನಿರುದ್ಯೋಗಿಗಳಿಗೆ ಸಂತಸದ ಸುದ್ದಿ ನೀಡಿದ ಆನಂದ ಸಿಂಗ್‌

ಸಾಮಾನ್ಯ ಅರ್ಹತಾ ಅಭ್ಯರ್ಥಿಗಳಿಗೆ ಒಂದು ಸಾವಿರ ರು., ಪ್ರವರ್ಗ-2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳಿಗೆ 500 ರು., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 100 ರು., ಪ.ಜಾ, ಪ.ಪಂ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಸೆ. 16ರಿಂದ ಅ. 16ರವರೆಗೆ ಅನ್‌ಲೈನ್‌ https://karunadu.karnataka.goṿ.in/hfw/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿಶೇಷ ನಿಯಮಗಳ ಅಡಿ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್‌ - ಕರ್ನಾಟಕ ವೃಂದದ ಖಾಲಿ ಹುದ್ದೆಗಳನ್ನು ಹಾಗೂ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಇದರಲ್ಲಿ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳಿಗೆ 1,246 ಹುದ್ದೆಗಳು ಸೇರಿದಂತೆ ತಜ್ಞರು, ಜನರಲ್‌ ಸರ್ಜರಿ, ಪ್ರಸೂತಿ, ಸ್ತ್ರೀರೋಗ, ಕಿವಿ, ಮೂಗು, ಗಂಟಲು, ಚರ್ಮರೋಗ, ಅರಿವಳಿಕೆ, ಮಕ್ಕಳ ತಜ್ಞರು, ನೇತ್ರ, ಕೀಲು, ಮೂಳೆ ರೋಗ, ರೇಡಿಯಾಲಜಿ ತಜ್ಞರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳು ಮತ್ತು ದಂತ ಆರೋಗ್ಯಾಧಿಕಾರಿಗಳು ಹುದ್ದೆ ಸೇರಿದಂತೆ 2,794 ಹುದ್ದೆಗಳು ಖಾಲಿ ಇವೆ ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ.