ಅಚಾರ್ಯ ಪಾಠ ಶಾಲೆ ಶಿಕ್ಷಣ ಸಂಸ್ಥೆಯು ಮೇ 3 ರಂದು ಬೆಂಗಳೂರಿನ ಬಸವನಗುಡಿಯ ಆಚಾರ್ಯ ಕ್ಯಾಂಪಸ್‌ನಲ್ಲಿ ಎಜುಕೇಷನ್ ಎಕ್ಸ್‌ಪೋ ಮತ್ತು ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ. ವಿವಿಧ ವಿದ್ಯಾಸಂಸ್ಥೆಗಳು ಮತ್ತು 100 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 10 ನೇ ತರಗತಿ ಪಾಸಾದವರಿಂದ ಪದವೀಧರರಿಗೆ ಉದ್ಯೋಗಾವಕಾಶಗಳಿವೆ.
ಬೆಂಗಳೂರು (ಏ.26): ಅಚಾರ್ಯ ಪಾಠ ಶಾಲೆ ಶಿಕ್ಷಣ ಸಂಸ್ಥೆ ವತಿಯಿಂದ ಮೇ 3ರಂದು ಬೆಂಗಳೂರಿನ ಬಸವನಗುಡಿಯಲ್ಲಿರೋ ಆಚಾರ್ಯ ಕ್ಯಾಂಪಸ್‌ನಲ್ಲಿ ಎಜುಕೇಷನ್ ಎಕ್ಸ್‌ಪೋ ಮತ್ತು ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಜುಕೇಷನ್ ಎಕ್ಸ್ಪೋದಲ್ಲಿ ನಗರದ ಹಲವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳು ಭಾಗವಹಿಸಲಿದ್ದು, ಒಂದೇ ವೇದಿಕೆಯಲ್ಲಿ ವಿವಿಧ ಉದ್ಯೋಗಾಧಾರಿತ ಕೋರ್ಸ್ಗಳ ಬಗ್ಗೆ ಮಾಹಿತಿ ದೊರೆಯಲಿದೆ. ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಜೊತೆ ನೇರ ಸಂವಾದ ನಡೆಸ ಬಹುದಾಗಿದೆ. ಇನ್ನು ಉದ್ಯೋಗ ಮೇಳದಲ್ಲಿ 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 10ನೇ ತರಗತಿ ಪಾಸಾದವರಿಂದ ಹಿಡಿದು ಯಾವುದೇ ಪದವೀಧರರು ಪಾಲ್ಗೊಂಡು ಉದ್ಯೋಗ ಅವಕಾಶ ಪಡೆಯ ಬಹುದಾಗಿದೆ. ಈಗಾಗಲೇ ನೋಂದಣಿ ಕಾರ್ಯ ಆರಂಭವಾಗಿದ್ದು, ಉಚಿತ ವಾಗಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ವಿಷ್ಣು ಭರತ್ ಆಲಂಪಲ್ಲಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಎ ಪ್ರಕಾಶ್ ಸೇರಿದಂತೆ ಇತರರು ಇದ್ದರು. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಗಾಗಿ 8861340966, 8660599140, 9741725946 ಸಂಪರ್ಕಿಸಲು ಕೋರಲಾಗಿದೆ.
