Bengaluru: ನೇಮಕಾತಿ ವಿಳಂಬ ಖಂಡಿಸಿ ಆಕಾಂಕ್ಷಿಗಳ ಧರಣಿ
ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ ಮಾಡದೆ ವಿಳಂಬ ಮಾಡಲಾಗುತ್ತಿದೆ. ನೇಮಕಾತಿಗಳಲ್ಲೂ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರು (ಸೆ.21) : ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ನೇಮಕಾತಿ ಮಾಡದೆ ವಿಳಂಬ ಮಾಡಲಾಗುತ್ತಿದೆ. ನೇಮಕಾತಿಗಳಲ್ಲೂ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.
ನೇಮಕ ಹಗರಣ ಬಗ್ಗೆ ಜಟಾಪಟಿ, ಕೋಲಾಹಲ: ಸದನದಲ್ಲಿ ಎಸ್‌ಐ ಕದನ
ಮಂಗಳವಾರ ಬೆಳಗ್ಗೆ ನೂರಾರು ಸಂಖ್ಯೆಯಲ್ಲಿ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದ ಸ್ಪರ್ಧಾತ್ಮಕ ಪರೀಕ್ಷಾ ಅಭ್ಯರ್ಥಿಗಳು, ಎಫ್‌ಡಿಎ, ಎಸ್‌ಡಿಎ, ಕೆಪಿಟಿಸಿಎಲ್, ಪೇದೆ, ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಇದರಿಂದ ನ್ಯಾಯಯುತವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಎರಡೂವರೆ ಲಕ್ಷ ಸರ್ಕಾರಿ ಹುದ್ದೆ ಮಂಜೂರಾಗಿದ್ದು, ಶೀಘ್ರ ಭರ್ತಿ ಮಾಡಬೇಕು. ಪೊಲೀಸ್ ಹುದ್ದೆಗಳ ನೇಮಕಾತಿಯಲ್ಲಿ ಸಾಮಾನ್ಯ ವರ್ಗಕ್ಕೆ 25 ವರ್ಷ ಹಾಗೂ ಪರಿಶಿಷ್ಟಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿಯಿದೆ. ಕೊರೋನಾ ಸಮಯದಲ್ಲಿ ನೇಮಕಾತಿ ನಡೆಯದೇ ಇರುವುದರಿಂದ ವಯೋಮಿತಿ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬೆಂಬಲ ವ್ಯಕ್ತಪಡಿಸಿದ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ದವಸ ಧಾನ್ಯಗಳ ಗಂಟನ್ನು ನೀಡಿದ ಪ್ರತಿಭಟನಾಕಾರರು, ಇದನ್ನು ಸರ್ಕಾರಕ್ಕೆ ತಲುಪಿಸಿ ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿದರು. ಗಂಟನ್ನು ಸ್ವೀಕರಿಸಿದ ಸಿದ್ದರಾಮಯ್ಯ ಅವರು, ನಿಮಗೆ ನ್ಯಾಯ ಕೊಡಿಸಲು ವಿಧಾನ ಮಂಡಲ ಅಧೀವೇಶನದಲ್ಲಿ ಮಾತನಾಡುತ್ತೇನೆ. ಸರ್ಕಾರಕ್ಕೆ ಧಾನ್ಯದ ಗಂಟು ತಲುಪಿಸಿ ಗಮನ ಸೆಳೆಯುತ್ತೇನೆ ಎಂದು ಭರವಸೆ ನೀಡಿದರು.
ಬುಟ್ಟಿಯಲ್ಲಿ ಹಾವಿಲ್ಲ: ಸರ್ಕಾರದ ಬುಟ್ಟಿಯೊಳಗೆ ಹಾವಿಲ್ಲ. ಸುಮ್ಮನೆ ಬುಸ್ ಎಂದು ಶಬ್ಧ ಮಾಡುತ್ತಿದ್ದಾರೆ. ಕೇರೆ ಹಾವೂ ಇಲ್ಲ, ನಾಗರ ಹಾವೂ ಇಲ್ಲ. ಶಾಂತಿಯುತ ಪ್ರತಿಭಟನೆ ಎಲ್ಲರ ಹಕ್ಕು. ನಿಮ್ಮ ಹೋರಾಟ ಮುಂದುವರೆಸಿ. ನಿಮ್ಮ ಪರವಾಗಿ ನಾವು ಸಹ ಹೋರಾಟ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಜಯಗಳಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ರೂಪಿಸುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.
ಶಿಕ್ಷಕರ ನೇಮಕಾತಿ ಅಕ್ರಮ: ಬಿಜೆಪಿ ಮಾಡಿದ ಆರೋಪ ನಮ್ಮ ವ್ಯಾಪ್ತಿಯಲ್ಲಿ ನಡೆದಿಲ್ಲ ಎಂದ ಮಾಜಿ ಶಿಕ್ಷಣ ಸಚಿವ
ರಾಜ್ಯ ಸರ್ಕಾರ ಇನ್ನಾದರೂ ಪಾರದರ್ಶಕ ನೇಮಕಾತಿ ನಡೆಸಿ, ಪ್ರಾಮಾಣಿಕರಿಗೆ ಉದ್ಯೋಗ ಸಿಗುವಂತೆ ಮಾಡಬೇಕು. ಇಲ್ಲದಿದ್ದರೆ ಯುವ ಜನರ ಆಕ್ರೋಶದ ಅಲೆಗೆ ಬಿಜೆಪಿಯ ಭ್ರಷ್ಟಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ.
-ಸಿದ್ದರಾಮಯ್ಯ, ವಿಧಾನಸಭೆ ಪ್ರತಿಪಕ್ಷ ನಾಯಕ