Asianet Suvarna News Asianet Suvarna News

BBMP 4 ಸಾವಿರ ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಿಬಿಎಂಪಿ ನಾಲ್ಕು ಸಾವಿರ ಪೌರ ಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

BBMP Recruitment 4 thousand Civic Workers
Author
Bengaluru, First Published Aug 30, 2019, 9:22 AM IST
  • Facebook
  • Twitter
  • Whatsapp

ಬೆಂಗಳೂರು [ಆ.30]: ಬಿಬಿಎಂಪಿ ಘನತ್ಯಾಜ್ಯ ವಿಭಾಗದಲ್ಲಿ ಖಾಲಿ ಇರುವ ‘ಡಿ’ಗ್ರೂಪ್‌ನ ನಾಲ್ಕು ಸಾವಿರ ಪೌರಕಾರ್ಮಿಕರ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದ್ದು, ಸೆ.9ರಿಂದ ಅ.9ರ ವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

ಕಳೆದ ಎರಡು ವರ್ಷದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊರಗುತ್ತಿಗೆ, ಎನ್‌.ಎಂ.ಆರ್‌, ದಿನಗೂಲಿ, ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಿದ ಪೌರಕಾರ್ಮಿಕರು ಅರ್ಜಿ ಸಲ್ಲಿಸಬಹುದಾಗಿದೆ. 

ಬಿಬಿಎಂಪಿಯ www.bbmp.govt.in ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಸೆ.9ರಿಂದ ಅ.9ರ ಒಳಗೆ ಸಲ್ಲಿಸಬಹುದು. 

ಬಿಬಿಎಂಪಿಯ 63 ಉಪವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅವರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಲಾಗಿದ್ದು, ಅರ್ಜಿ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದು ಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow Us:
Download App:
  • android
  • ios