DRDO Recruitment 2022: ವಿವಿಧ scientist ಹುದ್ದೆಗಳಿಗೆ ನೇಮಕಾತಿ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 58 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದೆ.
ಬೆಂಗಳೂರು (ಜೂ.4): ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮೆಕ್ಯಾನಿಕಲ್ ಇಂಜಿನಿಯರಿಂಗ್, ಆಪ್ಟಿಕಲ್ ಇಂಜಿನಿಯರಿಂಗ್ ಸೇರಿ ಇತರ ವಿಭಾಗಗಳಲ್ಲಿ ಹಲವಾರು ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 58 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://rac.gov.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.
ಒಟ್ಟು 58 ಹುದ್ದೆಗಳ ಮಾಹಿತಿ ಇಂತಿದೆ.
Scientist F : 3 ಹುದ್ದೆಗಳು
Scientist E : 6 ಹುದ್ದೆಗಳು
Scientist D : 15 ಹುದ್ದೆಗಳು
Scientist C : 34 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಬಿ.ಇ/ಬಿ.ಟೆಕ್/ಡಿಪ್ಲೊಮಾ; ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
IDBI RECRUITMENT 2022; ಬರೋಬ್ಬರಿ 1,544 ಹುದ್ದೆಗಳ ಭರ್ತಿಗೆ ನೇಮಕಾತಿ
ವಯೋಮಿತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ರಿಂದ 50 ವರ್ಷದ ಒಳಗಿರಬೇಕು.
ಅರ್ಜಿ ಶುಲ್ಕ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ OBC ,EWS ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕು. SC/ST/ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ಮತ್ತು ಹುದ್ದಗೆ ಅನುಗುಣವಾಗಿ ಮಾಸಿಕ ವೇತನ ದೊರೆಯಲಿದೆ.
Scientist F ಹುದ್ದೆಗೆ ರೂ, 1,31,100
Scientist E ಹುದ್ದೆಗೆ ರೂ, 1,23,100
Scientist D ಹುದ್ದೆಗೆ ರೂ, 78,800
Scientist C ಹುದ್ದೆಗೆ ರೂ, 67,700