HVF Avadi Recruitment 2022; ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ
ಚೆನ್ನೈ ಮೂಲದ ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25, ಕೊನೆಯ ದಿನವಾಗಿದೆ.
ಬೆಂಗಳೂರು (ಜೂ.10): ಭಾರತದ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಸಶಸ್ತ್ರ ವಾಹನ ನಿಗಮ ಲಿಮಿಟೆಡ್‌ನ ಒಂದು ಘಟಕವಾದ ಚೆನ್ನೈ ಮೂಲದ ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ (Heavy Vehicles Factory) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಗ್ರಾಜುಯೇಟ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಸೇರಿ ವಿವಿಧ 214 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 25, 2022 ಕೊನೆಯ ದಿನವಾಗಿದೆ. ಪದವಿ ಹಾಗೂ ಡಿಪ್ಲೊಮ ಪಾಸ್ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಒಟ್ಟು 214 ಹುದ್ದೆಗಳ ಮಾಹಿತಿ ವಿವರ ಇಲ್ಲಿದೆ
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಲ್ಲಿ 104 ಹುದ್ದೆಗಳಿದ್ದು ವಿವರ ಇಂತಿದೆ
ಮೆಕ್ಯಾನಿಕಲ್ ಎಂಜಿನಿಯರಿಂಗ್ : 50 ಹುದ್ದೆಗಳು
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 10 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ 19 : ಹುದ್ದೆಗಳು
ಸಿವಿಲ್ ಇಂಜಿನಿಯರಿಂಗ್ 15 : ಹುದ್ದೆಗಳು
ಆಟೋಮೊಬೈಲ್ ಎಂಜಿನಿಯರಿಂಗ್ : 10 ಹುದ್ದೆಗಳು
ಪಠ್ಯಪುಸ್ತಕದಲ್ಲಿ ರಾಜಕಾರಣ ಮಾಡಬಾರದು : Basavaraj Horatti
ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಲ್ಲಿ 110 ಹುದ್ದೆಗಳಿದ್ದು ವಿವರ ಇಂತಿದೆ
ಮೆಕ್ಯಾನಿಕಲ್ ಇಂಜಿನಿಯರಿಂಗ್ : 50 ಹುದ್ದೆಗಳು
ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ : 30 ಹುದ್ದೆಗಳು
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ : 07 ಹುದ್ದೆಗಳು
ಸಿವಿಲ್ ಇಂಜಿನಿಯರಿಂಗ್ : 05 ಹುದ್ದೆಗಳು
ಆಟೋಮೊಬೈಲ್ ಇಂಜಿನಿಯರಿಂಗ್ : 18 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್‌ನಲ್ಲಿ ಪದವಿ/ತಂತ್ರಜ್ಞಾನ ಮಾಡಿರಬೇಕು. ಟೆಕ್ನಿಕಲ್ ಅಪ್ರೆಂಟಿಸ್ ಅರ್ಜಿ ಸಲ್ಲಿಸುವವರು ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ/ತಂತ್ರಜ್ಞಾನ ಮಾಡಿರಬೇಕು.
ಕರ್ನಾಟಕದಲ್ಲಿ ಇಂದಿನಿಂದ ಪಿಯು ಕಾಲೇಜು ಶುರು: ಹಿಜಾಬ್ ನಿಷೇಧ
ವಯೋಮಿತಿ: ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷದ ಒಳಗಿರಬೇಕು. ವರ್ಗಾನುಸಾರ ವಯೋಮಿತಿ ಸಡಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ಅನುಸಾರವಾಗಿ ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಕನಿಷ್ಠ ರೂ.8000/- ರಿಂದ ಗರಿಷ್ಠ ರೂ.9000/- ವರೆಗೆ ವೇತನ ದೊರೆಯಲಿದೆ.
TCS MBA recruitment 2022: ಕೆಲಸಕ್ಕೆ ಅರ್ಜಿ ಹೇಗೆ ಸಲ್ಲಿಸಬೇಕು?, ಅರ್ಹತೆ ಏನು?
BSF ಒಟ್ಟು 281 ಹುದ್ದೆಗಳಿಗೆ ನೇಮಕಾತಿ: ಭಾರತೀಯ ರಕ್ಷಣಾ ಇಲಾಖೆ 2022ನೇ ಸಾಲಿನ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರಿಸಿದ್ದು, ಗಡಿ ಭದ್ರತಾ ಪಡೆ( ಬಿಎಸ್‌ಎಫ್) ಇದೀಗ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಿದೆ. ಇದರ ಅನ್ವಯ ಒಟ್ಟು 281 ಹುದ್ದೆಗಳು ಖಾಲಿ ಇದ್ದು,ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 28 ಎಂದು ಬಿಎಸ್‌ಎಫ್ ಹೇಳಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕವರೆಗೆ ಕಾಯದೇ ಶೀಘ್ರವೇ ಸೂಕ್ತ ದಾಖಲೆಗಳ ಸಹಿತ ಭರ್ತಿಗೊಳಿಸಿದ ಅರ್ಜಿಗಳನ್ನು ಸಲ್ಲಿಸಬೇಕಿದೆ. ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ಕೆಳಗಡೆ ನೀಡಲಾಗಿದೆ.
ಹುದ್ದೆಗಳ ವಿವರ ಇಲ್ಲಿದೆ: ಬಾರ್ಡರ್ ಸೆಕ್ಯೂರಿಟಿ ಫೋರ್ಸ್(ಬಿಎಸ್‌ಎಫ್) ಹೊರಡಿಸಿರುವ ನೇಮಕಾತಿ ಅಧಿಸೂಚನೆಯಲ್ಲಿ ಗ್ರೂಪ್ ಬಿ ವಿಭಾಗದಲ್ಲಿ ಒಟ್ಟು 281 ಹುದ್ದೆಗಳು ಖಾಲಿ ಇದೆ. ಅಭ್ಯರ್ಥಿಗಳು ಭಾರತಾದ್ಯಂತ ಕರ್ತವ್ಯ ನಿರ್ವಹಸಲು ಸಿದ್ಧರಿರಬೇಕಿದೆ. ಸಬ್‌ಇನ್‌ಸ್ಪೆಕ್ಟರ್( ಮಾಸ್ಟರ್) 08 ಹುದ್ದೆ, ಸಬ್‌ಇನ್‌ಸ್ಪೆಕ್ಟರ್(ಎಂಜಿನ್ ಚಾಲಕ) 06 ಹುದ್ದೆ),ಸಬ್‌ಇನ್‌ಸ್ಪೆಕ್ಟರ್(ಕಾರ್ಯಾಗಾರ) 02 ಹುದ್ದೆ, ಹೆಡ್‌ಕಾನ್‌ಸ್ಟೇಬಲ್(ಮಾಸ್ಟರ್)52 ಹುದ್ದೆಗಳು, ಹೆಡ್‌ಕಾನ್‌ಸ್ಟೇಬಲ್(ಎಂಜಿನ್ ಡ್ರೈವರ್) 64 ಹುದ್ದೆ, ಹೆಡ್‌ಕಾನ್‌ಸ್ಟೇಬಲ್(ಕಾರ್ಯಾಗಾರ) 19 ಹುದ್ದೆ ಹಾಗೂ ಕಾನ್‌ಸ್ಟೇಬಲ್(ಸಿಬ್ಬಂದಿ) 130 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ ಎಂದು ಬಿಎಸ್‌ಎಫ್ ಹೇಳಿದೆ.