Asianet Suvarna News Asianet Suvarna News

HPCL Recruitment 2022: ಒಟ್ಟು 186 ವಿವಿಧ ಹುದ್ದೆಗಳಿಗೆ ನೇಮಕಾತಿ

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್  ಖಾಲಿ ಇರುವ 186  ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು,  ಅರ್ಜಿ ಸಲ್ಲಿಸಲು ಮೇ. 21 ಕೊನೆಯ ದಿನವಾಗಿದೆ.

Hindustan petroleum Corporation Limited recruitment 2022 notification for 186 vacancies gow
Author
Bengaluru, First Published Apr 27, 2022, 11:42 AM IST

ಬೆಂಗಳೂರು(ಎ.27): ದೇಶದ ಪ್ರಮುಖ ಕಂಪನಿಯಾಗಿರುವ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (Hindustan petroleum Corporation Limited- HPCL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿವಿಧ ಇಂಜಿನಿಯರಿಂಗ್, ಪೆಟ್ರೋಕೆಮಿಕಲ್ ವೃತ್ತಿಪರರು (Petrochemical professionals), ಆರ್ & ಡಿ ವೃತ್ತಿಪರರು (Research and Development Professionals) ಮತ್ತು ಇತರ ಹುದ್ದೆಗಳು. ಸೇರಿ ಒಟ್ಟು 186 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮೇ. 21 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ  hindustanpetroleum.com ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 186 ಹುದ್ದೆಗಳ ಮಾಹಿತಿ ಇಂತಿದೆ
ಕಾರ್ಯಾಚರಣೆ ತಂತ್ರಜ್ಞ (Operations Technician) :94 ಹುದ್ದೆಗಳು
ಬಾಯ್ಲರ್ ತಂತ್ರಜ್ಞ (Boiler Technician) :18 ಹುದ್ದೆಗಳು
ನಿರ್ವಹಣೆ ತಂತ್ರಜ್ಞ (Maintenance Technician) : 9 ಹುದ್ದೆಗಳು
ಜೂನಿಯರ್ ಅಗ್ನಿಶಾಮಕ ಮತ್ತು ಸುರಕ್ಷತೆ ಬೋಧಕ( Jr Fire and Safety Inspector) : 18 ಹುದ್ದೆಗಳು
ಲ್ಯಾಬ್ ಸಹಾಯಕ (Lab Analyst) : ಹುದ್ದೆಗಳು

ECIL RECRUITMENT 2022: ವಿವಿಧ 20 ಹುದ್ದೆಗಳಿಗೆ ನೇಮಕಾತಿ, ₹2.4 ಲಕ್ಷ ವೇತನ!

ಶೈಕ್ಷಣಿಕ ವಿದ್ಯಾರ್ಹತೆ:   ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಪದವಿ, ಇಂಜಿನಿಯರಿಂಗ್, B.Sc   ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿರಬೇಕು.  SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಕಂಪ್ಯೂಟರ್ ಪರೀಕ್ಷೆ, ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು  ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಶುಲ್ಕ: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಓಬಿಸಿ ಮತ್ತು EWS ಅಭ್ಯರ್ಥಿಗಳಿಗೆ ₹590 ಅರ್ಜಿ ಶುಲ್ಕ ವಿಧಿಸಲಾಗಿದೆ. ಮಿಕ್ಕುಳಿದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ವೇತನ ವಿವರ: ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ  ಮಾಸಿಕ ಕನಿಷ್ಠ ₹55,000 ರೂ ನಿಂದ ವೇತನ ಆರಂಭವಾಗಲಿದೆ.

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ Ashwath Narayan 

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ (employment) ಸೃಷ್ಟಿಯಾಗಲಿದೆ. ಜತೆಗೆ  ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ (Minister for Electronics and IT/BT C N Ashwath Narayan) ಹೇಳಿದ್ದಾರೆ.

Follow Us:
Download App:
  • android
  • ios