ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) 5 ಭದ್ರತಾ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. SSLC ಪಾಸಾದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ 35,000 ರೂ. ವೇತನ ನೀಡಲಾಗುತ್ತದೆ.
ಬೆಂಗಳೂರು: ಭಾರತದ ನಂಬರ್ ಒನ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಈಗ ಭದ್ರತಾ ಸಹಾಯಕ (Security Assistant) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ( ಐಐಎಸ್‌ಸಿ )
ಹುದ್ದೆಯ ವಿವರ: ಸೆಕ್ಯುರಿಟಿ ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ : 5
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ (SSLC) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜನವರಿ-24-2026ರ ಅನ್ವಯ ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕವಿಲ್ಲ.
ಸಂಬಳ:
ಅಭ್ಯರ್ಥಿಗಳಿಗೆ ಮಾಸಿಕ 35,000 ರು.ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ವ್ಯಾಪಾರ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲು IISc ಅಧಿಕೃತ ವೆಬ್‌ಸೈಟ್ iisc.ac.in ಗೆ ಭೇಟಿ ನೀಡಿ.
ವೆಬ್‌ಸೈಟ್‌ನಲ್ಲಿ ‘Careers’ ವಿಭಾಗಕ್ಕೆ ಹೋಗಿ Security Assistant ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಧಿಕೃತ ಅಧಿಸೂಚನೆಯನ್ನು ಪೂರ್ತಿಯಾಗಿ ಓದಿ, ನೀವು ಅರ್ಹರಾಗಿದ್ದಲ್ಲಿ ‘Apply Online’ ಮೇಲೆ ಕ್ಲಿಕ್ ಮಾಡಿ.
ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಮತ್ತು ಅರ್ಜಿ ಸಲ್ಲಿಕೆಯನ್ನು ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನಾಂಕ: ಜನವರಿ 06-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜನವರಿ 27-2026


