ಭಾರತೀಯ ಸೇನೆಯು 350 ಶಾರ್ಟ್ ಸರ್ವಿಸ್ ಎಂಟ್ರಿ (ತಾಂತ್ರಿಕ) ಪುರುಷ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇಂಜಿನಿಯರಿಂಗ್ ಪದವಿ (BE/B.Tech) ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ ಮತ್ತು ಆಯ್ಕೆಯಾದವರಿಗೆ ಆಕರ್ಷಕ ವೇತನ ಶ್ರೇಣಿ ಇರುತ್ತದೆ.

ಭಾರತೀಯ ಸೇನೆಯು 350 ಶಾರ್ಟ್ ಸರ್ವಿಸ್ ಎಂಟ್ರಿ (ತಾಂತ್ರಿಕ) ಪುರುಷ ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

ಸೇವೆಯ ಹೆಸರು: ಭಾರತೀಯ ಸೇನೆ (Indian Army)

ಹುದ್ದೆಯ ಹೆಸರು: ಶಾರ್ಟ್ ಸರ್ವಿಸ್ ಎಂಟ್ರಿ

ಒಟ್ಟು ಹುದ್ದೆಗಳು: 350

ಉದ್ಯೋಗ ಸ್ಥಳ: ಅಖಿಲ ಭಾರತ

ಈ ಹುದ್ದೆಯ ವಿಶೇಷತೆಗಳೇನು?

ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 56,000 ದಿಂದ-2,24,400 ವರೆಗೆ ಅತ್ಯುತ್ತಮ ವೇತನ ಶ್ರೇಣಿ ಸಿಗಲಿದೆ.

ಅರ್ಜಿ ಶುಲ್ಕವಿಲ್ಲ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ BE / B.Tech (ಇಂಜಿನಿಯರಿಂಗ್) ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ

ಏಪ್ರಿಲ್‌ 01-2027ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ ವಯಸ್ಸು: 20 ವರ್ಷ, ಗರಿಷ್ಠ ವಯಸ್ಸು: 27 ವರ್ಷಗಳು.

ಭಾರತೀಯ ಸೇನೆಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಶಾರ್ಟ್‌ಲಿಸ್ಟಿಂಗ್

SSB ಸಂದರ್ಶನ

ವೈದ್ಯಕೀಯ ತಪಾಸಣೆ

ಅಂತಿಮ ಅರ್ಹತಾ ಪಟ್ಟಿ

ಅರ್ಜಿ ಸಲ್ಲಿಸುವುದು ಹೇಗೆ?

ಮೊದಲಿಗೆ ಭಾರತೀಯ ಸೇನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಆನ್‌ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ನಿಮ್ಮ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಐಡಿ ಪ್ರೂಫ್, ವಯಸ್ಸಿನ ದಾಖಲೆ, ಬಿಇ/ಬಿ.ಟೆಕ್ ಪ್ರಮಾಣಪತ್ರಗಳನ್ನು ಸಿದ್ಧವಾಗಿಟ್ಟುಕೊಳ್ಳಿ.

ವೆಬ್‌ಸೈಟ್‌ನಲ್ಲಿ ನೀಡಲಾದ SSC(T)-68 Men ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಅಗತ್ಯವಿರುವ ಎಲ್ಲಾ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ ಮತ್ತು ನಿಮ್ಮ ಇತ್ತೀಚಿನ ಫೋಟೋ ಹಾಗೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭವಾದ ದಿನಾಂಕ: ಜುಲೈ 09-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 07-2026