Asianet Suvarna News Asianet Suvarna News

IOCL Recruitment 2022: ವಿವಿಧ ಜೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ

ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.28  ಅಗಿದೆ.

Indian Oil Corporation Recruitment 2022 notification for Junior Engineering Assistant post gow
Author
Bengaluru, First Published May 12, 2022, 3:57 PM IST

ಬೆಂಗಳೂರು (ಮೇ.12): ಕೇಂದ್ರ ಸರ್ಕಾರದ (Central Government) ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation- IOCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಐಒಸಿಎಲ್ (IOCL) ನಲ್ಲಿ ಒಟ್ಟು 19 ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್   ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ.28 ಆಗಿದೆ. ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ  ಕೆಮಿಕಲ್ / ರಿಫೈನರಿ ಮತ್ತು ಪೆಟ್ರೋಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಅಥವಾ ಬಿಎಸ್ಸಿ ಹೊಂದಿರಬೇಕು.  ಕನಿಷ್ಠ 45% ಅಂಕಗಳೊಂದಿಗೆ ಇನ್‌ಸ್ಟ್ರುಮೆಂಟೇಶನ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಎಲೆಕ್ಟ್ರಾನಿಕ್ಸ್/ ಇನ್‌ಸ್ಟ್ರುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮತ್ತು ಕನಿಷ್ಠ ಒಂದು ವರ್ಷದ ಅನುಭವ ಹೊಂಸಿರಬೇಕು.

EASTERN RAILWAY RECRUITMENT 2022: ಬರೋಬ್ಬರಿ 1201 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯಸ್ಸು 18 ರಿಂದ 26 ವರ್ಷದೊಳಗಿರಬೇಕು. SC/ ST/ OBC (NCL)/ PwBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ  ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ  ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ/ದೈಹಿಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

ವೇತನ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಜೂನಿಯರ್ ಇಂಜಿನಿಯರಿಂಗ್ ಅಸಿಸ್ಟೆಂಟ್  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ  ₹25000 ರಿಂದ ₹105000 ವೇತನವನ್ನು ನೀಡಲಾಗುವುದು.

NIT Karnataka Recruitment 2022: ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ  

ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ ಗುಮಾಸ್ತ ಹುದ್ದೆಗೆ ಅರ್ಜಿ ಆಹ್ವಾನ: ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ ಬ್ರ್ಯಾಂಚ್ ಮತ್ತು ಪ್ರಮುಖ ಕೇಂದ್ರಗಳಲ್ಲಿ ಇರುವ  ಗುಮಾಸ್ತ ( Clerk ) ಹುದ್ದೆಗಳಿಗೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್‌ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು https://www.karnatakabank.com/ ಗೆ ಭೇಟಿ ನೀಡಲು ಕೋರಲಾಗಿದೆ. ನೇಮಕಾತಿ ಅಧಿಸೂಚನೆ ನೋಡಲು ಈ ಲಿಂಕ್ ಕ್ಲಿಕ್ ಮಾಡಿ

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಡ್ಡಾಯವಾಗಿ  ಕನಿಷ್ಠ 60% ನೊಂದಿಗೆ ಪದವಿ ಪಾಸು ಮಾಡಿರಬೇಕು.

ವಯೋಮಿತಿ: ಕರ್ನಾಟಕ ಬ್ಯಾಂಕ್‌ನಲ್ಲಿ ಖಾಲಿ ಇರುವ  ಕ್ಲರ್ಕ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಠ 26 ವರ್ಷ ವಯೋಮಿತಿ ಹೊಂದಿರಬೇಕು. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Follow Us:
Download App:
  • android
  • ios