Asianet Suvarna News Asianet Suvarna News

Job Fair In Belagavi: ಡಿ.23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ

* ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗ ಮೇಳ
* ಡಿ.23ರಂದು ಬೆಳಗಾವಿಯಲ್ಲಿ ನಡೆಯಲಿರುವ ಉದ್ಯೋಗ ಮೇಳ
* ಮಾಹಿತಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ

Job Fair In Belagavi on Dec 23 Says Ashwath Narayan rbj
Author
Bengaluru, First Published Dec 17, 2021, 9:50 PM IST

ಬೆಳಗಾವಿ, (ಡಿ.17):  ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಇದೇ ಡಿ.23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ(Jobs fair) ನಡೆಯಲಿದೆ.

ಬೆಳಗಾವಿಯ(Belagavi) ಉದ್ಯಮ್ ಬಾಗ್‍ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ನಡೆಯಲಿದೆ.

ಖಾಸಗಿ, ಸರ್ಕಾರಿ ಉದ್ಯೋಗಗಳ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ (Dr CN Ashwath Narayan) ತಿಳಿಸಿದ್ದಾರೆ.

ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಓಲಾ, ಎಚ್‍ಪಿ ಸೇರಿದಂತೆ 34 ಕಂಪನಿಗಳು ಈಗಾಗಲೇ ಮೇಳದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ಸೂಚಿಸಿದ್ದು, ಇನ್ನೂ 70 ಕಂಪನಿಗಳು ಉತ್ಸುಕವಾಗಿವೆ. ಮೇಳವು ಸಂಪೂರ್ಣ ವಾಗಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ‘ಸ್ಕಿಲ್ ಕನೆಕ್ಟ್  ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಮಾಹಿತಿ ಹಂಚಿಕೊಂಡರು.

ನೋಂದಣಿ ಮಾಡಿಕೊಂಡ ನಂತರ ಉದ್ಯೋಗದ ಸ್ವರೂಪ, ಯಾವ ಕಂಪನಿಯು ಅಭ್ಯರ್ಥಿಯನ್ನು ಸಂದರ್ಶಿಸಲಿದೆ ಎನ್ನುವ ಅಗತ್ಯ ಮಾಹಿತಿಗಳನ್ನು ಒದಗಿಸಲಾಗುವುದು. ಡಿ.23ರಂದು ನಡೆಯುವ ಮೊದಲ ಸುತ್ತಿನ ಸಂದರ್ಶನದಲ್ಲಿ ಆಯ್ಕೆಯಾಗುವವರಿಗೆ ಮರು ದಿನವಾದ ಡಿ.24 ರಂದು ಎರಡನೇ ಸುತ್ತಿನ ಸಂದರ್ಶನ ನಡೆಯಲಿದೆ ಎಂದು ಸಚಿವರು ಹೇಳಿದರು.

ಸಂದರ್ಶನದಲ್ಲಿ ವಿಫಲರಾಗುವ ಅಭ್ಯರ್ಥಿಗಳಿಗೆ ಏನು ಕೊರತೆ ಇದೆ ಎನ್ನುವುದನ್ನು ಕಂಡುಕೊಂಡು, ಅಂತಹವರಿಗೆ ಸೂಕ್ತ ಮತ್ತು ಅಗತ್ಯ ಕೌಶಲ್ಯ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು. 80 ಸಾವಿರ ಉದ್ಯೋಗಾಕಾಂಕ್ಷಿಗಳಲ್ಲಿ 40 ಸಾವಿರ ಜನರಲ್ಲಿ ಸರಿಯಾದ ಕೌಶಲ್ಯಗಳೇ ಇಲ್ಲ. ಈ ಕೊರತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. 

ಸ್ಥಳೀಯರಿಗೆ ಉದ್ಯೋಗ
ಡಾ.ಸರೋಜಿನಿ ಮಹಿಷಿ ವರದಿಯಂತೆ ನಮ್ಮ ಸರ್ಕಾರ ಕೈಗಾರಿಕಾ ಪ್ರದೇಶಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕೊಡಲು ಬದ್ದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಸಭೆಯಲ್ಲಿಂದು ತಿಳಿಸಿದರು. 

ಇಂದು (ಶುಕ್ರವಾರ) ಬೆಳಗಾವಿಯಲ್ಲಿ ನಡೆಯುತ್ತಿರುವ  ವಿಧಾನಸಭೆ ಚಳಿಗಾಲ ಅಧಿವೇಶನದಲ್ಲಿ (Belagavi Winter Session) ಶಾಸಕ ಅಮೃತ್ ದೇಸಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ (Murugesh Nirani), ಡಾ.ಸರೋಜಿನಿ ಮಹಿಷಿ ವರದಿಯಂತೆ ಕೈಗಾರಿಕಾ ಪ್ರದೇಶಗಳಿಗಾಗಿ  ಜಮೀನು ನೀಡಿದ ರೈತರಿಗೆ ಪರಿಹಾರ ನೀಡುವುದರ ಜೊತೆಗೆ ಅವರ ಕುಟುಂಬದ ಸದಸ್ಯರಿಗೆ ಜಮೀನು ನೀಡಿದ್ದೇವೆ. ಯಾವುದೇ ಕಾರಣಕ್ಕೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದರು. 

ಧಾರವಾಡ ಜಿಲ್ಲೆ ಬೇಲೂರು ಕೈಗಾರಿಕಾ ಪ್ರದೇಶಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿಗಾಗಿ ಒಟ್ಟು 1992.19 ಎಕರೆ ಜಮೀನುನನ್ನು ಭೂ ಸ್ವಾೀನಪಡಿಸಿಕೊಳ್ಳಲಾಗಿದೆ.  ಬೇಲೂರಿನಲ್ಲಿ ಒಂದು ಎಕರೆಗೆ 12 ಸಾವಿರ ರೂ. ಮಮಿಘಟ್ಟಿಯಲ್ಲಿ 15 ಸಾವಿರ, ಗುಗ್ಗರಕಟ್ಟೆಯಲ್ಲಿ 18 ಸಾವಿರ  ಪ್ರತಿ ಎಕರೆಗೆ ಪರಿಹಾರ ಕೊಡತ್ತಿದ್ದೇವೆ. ಬೇಲೂರು ಕೈಗಾರಿಕಾ  ಪ್ರದೇಶದಲ್ಲಿ ಒಟ್ಟು 1414  ಉದ್ಯೋಗಗಳನ್ನು  ನೀಡಲಾಗಿದೆ. 1538 ಸ್ಥಳೀಯರಿಗೆ ಹಾಗೂ ಭೂಮಿ ಕಳೆದುಕೊಂಡ 76 ಜನರಿಗೆ ಉದ್ಯೋಗ ನೀಡಲಾಗಿದೆ  ಎಂದು ವಿವರಿಸಿದರು. 

ಒಂದು ವೇಳೆ ಯಾವುದಾದರೂ ಕೈಗಾರಿಕಾ ಪ್ರದೇಶಗಳಿಗೆ ಉದ್ಯೋಗ ನೀಡದೆ ಇರುವುದನ್ನು ಗಮನಕ್ಕೆ ತಂದರೆ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ಕೊಟ್ಟರು.

Follow Us:
Download App:
  • android
  • ios