ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಉದ್ಯೋಗ ಮೇಳ: ಕಟೀಲ್‌

ನಿರುದ್ಯೋಗ ನಿವಾರಣೆಗೆ ಪ್ರಧಾನಿ ಮೋದಿ ಮಹತ್ವದ ಹೆಜ್ಜೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ 

Job Fair in BJP Ruled States in India Says Nalin Kumar Kateel grg

ಬೆಂಗಳೂರು(ಅ.23):  ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್‌ ಮೂಲಕ 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನ ರೋಜ್‌ಗಾರ್‌ ಮೇಳಕ್ಕೆ ಚಾಲನೆ ನೀಡಿದ್ದು, ನಿರುದ್ಯೋಗ ನಿವಾರಣೆಯ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಹೊಸದಾಗಿ ಸೇರ್ಪಡೆಗೊಂಡ 75 ಸಾವಿರ ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದೊಂದು ಮಹತ್ವದ ಉಪಕ್ರಮವಾಗಿದೆ. ಈ ಮೂಲಕ ನಿರುದ್ಯೋಗ ನಿವಾರಣೆಯ ಕನಸು ನನಸಾಗಲಿದೆ. ಇದಕ್ಕಾಗಿ ರಾಜ್ಯ ಬಿಜೆಪಿ ವತಿಯಿಂದ ಪ್ರಧಾನಿಯವರಿಗೆ ಧನ್ಯವಾದ ಹೇಳುತ್ತೇನೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಪ್ರಧಾನಿಗಳು ಈ ಕಾರ್ಯಕ್ರಮ ಕೈಗೊಂಡಿದ್ದು, 75 ಸಾವಿರ ಯುವಕರಿಗೆ ಉದ್ಯೋಗ ಲಭಿಸಿದೆ. ಬಿಜೆಪಿ ಆಡಳಿತವುಳ್ಳ ವಿವಿಧ ರಾಜ್ಯಗಳಲ್ಲಿ ಇಂತಹ ಉದ್ಯೋಗ ಮೇಳ ನಡೆಯಲಿದೆ. ಇದರಿಂದ ಯುವ ಸಮೂಹದ ಉದ್ಯೋಗದ ಆಶಯ ಈಡೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Rozgar Mela: ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಮೋದಿ, 75 ಸಾವಿರ ಸಿಬ್ಬಂದಿಗೆ ನೇಮಕಾತಿ ಪತ್ರ ವಿತರಣೆ!

ಭಾರತವನ್ನು ಅಭಿವೃದ್ಧಿ ಹೊಂದಿದ ಮತ್ತು ಸ್ವಾವಲಂಬಿ ರಾಷ್ಟ್ರವಾಗಿ ಮಾಡುವ ಕನಸು ಇದರಿಂದ ನನಸಾಗಲಿದೆ. ಉದ್ಯಮಿಗಳು, ಕೈಗಾರಿಕೆದಾರರು ಸೇರಿ ಎಲ್ಲರೂ ಈ ಕಾರ್ಯಕ್ರಮದಲ್ಲಿ ತಮ್ಮ ಸಹಾಯಹಸ್ತ ಚಾಚಲಿದ್ದಾರೆ. ಇದು ದೇಶದ ಅಮೃತ ಕಾಲವಾಗಿದ್ದು, ಎಲ್ಲರ ಪ್ರಯತ್ನದಿಂದ ಇದು ಈಡೇರುವ ಆಶಯ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರದ್ದು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕಳೆದ ಎಂಟು ವರ್ಷಗಳ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತವು 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಮುನ್ನಡೆ ಸಾಧಿಸಿದೆ. ಸ್ಕಿಲ್‌ ಇಂಡಿಯಾ ಅಭಿಯಾನದಡಿ ಕೌಶಲ್ಯ ವೃದ್ಧಿಗೆ ಮಹತ್ವ ಕೊಟ್ಟಿದ್ದು, 1.25 ಕೋಟಿ ಯುವಕರು ಕೌಶಲ್ಯವನ್ನು ಹೆಚ್ಚಿಸಿಕೊಂಡಿದ್ದಾರೆ. ಮುದ್ರಾ ಯೋಜನೆಯಿಂದ 20 ಲಕ್ಷ ಕೋಟಿ ರು. ಸಾಲವಾಗಿ ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗಿದೆ. ಉತ್ಪಾದನಾ ಕ್ಷೇತ್ರ ಮತ್ತು ಪ್ರವಾಸೋದ್ಯಮಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಈ ಮೂಲಕ ಹೆಚ್ಚು ಉದ್ಯೋಗ ಸೃಷ್ಟಿಯ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದರು.
 

Latest Videos
Follow Us:
Download App:
  • android
  • ios