SSLC ಪಾಸ್ ಆದವರಿಗೆ ಇಲ್ಲಿದೆ ಉದ್ಯೋಗಾವಕಾಶ
ಕೊಪ್ಪಳದಲ್ಲಿ ಮಾರ್ಚ್ 14, 15ರಂದು ಜಿಲ್ಲಾ ಉದ್ಯೋಗ ಮೇಳ| ಉದ್ಯೋಗ ಮೇಳದಲ್ಲಿ 150 ಕಂಪನಿಗಳು ಭಾಗವಹಿಸಲಿವೆ| ಪುರುಷ ಮತ್ತು ಮಹಿಳಾ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು|
ಕೊಪ್ಪಳ(ಫೆ.26): ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್ ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಾರ್ಚ್ 14 ಮತ್ತು 15 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಮಾರ್ಚ್ 14ರಂದು ಉದ್ಯೋಗಾಕಾಂಕ್ಷಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿರುತ್ತದೆ. ಉದ್ಯೋಗಾಕಾಂಕ್ಷಿಗಳು ಅವರು ಹೊಂದಿರುವ ವಿದ್ಯಾರ್ಹತೆಗೆ ಅನುಗುಣವಾಗಿ ಉತ್ತಮ ಉದ್ಯೋಗಾಕಾಂಕ್ಷಿಗಳು ಮತ್ತು ನಿಯೋಜಕರನ್ನು ಒಂದೇ ವೇದಿಕೆಯಲ್ಲಿ ತರಲು ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಸ್ಥಳೀಯ ಮಟ್ಟದ ಒಟ್ಟಾರೆ 150 ಉದ್ಯೋಗದಾತರು (ಕಂಪನಿಗಳು) ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದಾರೆ.
18ರಿಂದ 35 ವರ್ಷದ ವಯೋಮಿತಿಯಲ್ಲಿರುವ ಅವಿದ್ಯಾವಂತರು ಮತ್ತು ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ವಿವಿಧ ಪದವಿ, ಎಂ.ಬಿ.ಎ, ಎಂ.ಟೆಕ್, ವಿವಿಧ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ಪುರುಷ ಮತ್ತು ಮಹಿಳಾ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದಾಗಿದೆ.
ಕರ್ನಾಟಕ ಪೊಲೀಸ್ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಹಾಕಿ
ಆಸಕ್ತರು ಈಗಾಗಲೇ ಕೊಪ್ಪಳ ಜಿಲ್ಲಾಡಳಿತದಿಂದ ಅನಾವರಣಗೊಳಿಸಲಾಗಿರುವ ಜಾಲತಾಣದಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಉದ್ಯೋಗ ಮೇಳದ ಯಶಸ್ವಿಗಾಗಿ ವೇದಿಕೆ ಸಮಿತಿ, ಆಹಾರ ಸಮಿತಿ, ಸಾರಿಗೆ ಸಮಿತಿ, ಆರೋಗ್ಯ ಸಮಿತಿ, ಭದ್ರತಾ ಸಮಿತಿ, ನೋಡಲ್ ಅಧಿಕಾರಿಗಳ ಸಮಿತಿ ಸೇರಿದಂತೆ 12 ಸಮಿತಿಗಳನ್ನು ರಚಿಸಲಾಗುವುದು. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉದ್ಯೋಗ ಮೇಳವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.