ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ದೇಶದ ಯುವಕರಿಗೆ ಸುವರ್ಣಾವಕಾಶ ಸಿಕ್ಕಿದೆ. ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ (URSC) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕ್ರಿಯೆಯು ಆರಂಭವಾಗಿದೆ.

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುವ ದೇಶದ ಯುವಕರಿಗೆ ಸುವರ್ಣಾವಕಾಶ ಸಿಕ್ಕಿದೆ. ಬೆಂಗಳೂರಿನ ಯು ಆರ್ ರಾವ್ ಉಪಗ್ರಹ ಕೇಂದ್ರದಲ್ಲಿ (URSC) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕ್ರಿಯೆಯು ಆರಂಭವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ್ಯಾಷನಲ್ ಅಪ್ರೆಂಟಿಸ್‌ಶಿಪ್ ಟ್ರೈನಿಂಗ್ ಸ್ಕೀಮ್ (NATS) ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 29, 2026 ಕೊನೆಯ ದಿನವಾಗಿದೆ. ಈ ನೇಮಕಾತಿಯಡಿ ಪದವೀಧರರು, ಡಿಪ್ಲೊಮಾ ಹೊಂದಿರುವವರು ಮತ್ತು ವಾಣಿಜ್ಯ (Commerce) ವಿದ್ಯಾರ್ಥಿಗಳಿಗೆ ಒಟ್ಟು 410 ಹುದ್ದೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಹುದ್ದೆಗಳ ವಿವರ ಮತ್ತು ಮಾಸಿಕ ಸ್ಟೈಪೆಂಡ್

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮಾಸಿಕ ಸ್ಟೈಪೆಂಡ್ (ವೇತನ) ಸಹ ನೀಡಲಾಗುತ್ತದೆ. ಹುದ್ದೆಗಳ ಸಂಪೂರ್ಣ ವಿವರ ಇಲ್ಲಿದೆ..

ಅಪ್ರೆಂಟಿಸ್ ವರ್ಗಹುದ್ದೆಗಳ ಸಂಖ್ಯೆಮಾಸಿಕ ಸ್ಟೈಪೆಂಡ್
ಗ್ರಾಜುಯೇಟ್ ಅಪ್ರೆಂಟಿಸ್220ರೂ. 12,300
ಟೆಕ್ನಿಷಿಯನ್ ಅಪ್ರೆಂಟಿಸ್120ರೂ. 10,900
ಕಮರ್ಷಿಯಲ್ ಅಪ್ರೆಂಟಿಸ್70ರೂ. 10,900

ಅಪ್ರೆಂಟಿಸ್ ವರ್ಗ ಹುದ್ದೆಗಳ ಸಂಖ್ಯೆ ಮಾಸಿಕ ಸ್ಟೈಪೆಂಡ್ ಗ್ರಾಜುಯೇಟ್ ಅಪ್ರೆಂಟಿಸ್ (Graduate Apprentice) 220 ರೂ. 12,300 ಟೆಕ್ನಿಷಿಯನ್ ಅಪ್ರೆಂಟಿಸ್ (Technician Apprentice) 120 ರೂ. 10,900 ಕಮರ್ಷಿಯಲ್ ಅಪ್ರೆಂಟಿಸ್ (Commercial Apprentice) 70 ರೂ. 10,900

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು 

  • ಅಧಿಕೃತ NATS ಪೋರ್ಟಲ್‌ಗೆ ಭೇಟಿ ನೀಡಿ: nats.education.gov.in 
  • ನಿಮ್ಮ ನೋಂದಣಿ (Registration) ಪ್ರಕ್ರಿಯೆಯನ್ನು ಪೂರ್ಣಗೊಳಿಸಿ
  • ನೋಂದಾಯಿತ ಇಮೇಲ್ ಐಡಿ ಹಾಗೂ ಪಾಸ್‌ವರ್ಡ್ ಬಳಸಿ
  • ಲಾಗ್ ಇನ್ ಮಾಡಿ ಅಪ್ರೆಂಟಿಸ್‌ಶಿಪ್ ಮುಕ್ತ ಅವಕಾಶಗಳ ಪಟ್ಟಿಯಲ್ಲಿ 'URSC ISRO' ಎಂದು ಹುಡುಕಿ 
  • ನಿಮಗೆ ಸೂಕ್ತವಾದ ಅಪ್ರೆಂಟಿಸ್ ಹುದ್ದೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ 
  • ಅಗತ್ಯವಿರುವ ಎಲ್ಲಾ ಶೈಕ್ಷಣಿಕ ಮತ್ತು ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ 
  • ಕೇಳಲಾದ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಕೊನೆಯದಾಗಿ ಅರ್ಜಿಯನ್ನು ಸಬ್ಮಿಟ್ ಮಾಡಿ
  • ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಅಭ್ಯರ್ಥಿಗಳ ಶೈಕ್ಷಣಿಕ ಸಾಧನೆಯ (Academic Performance) ಆಧಾರದ ಮೇಲೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಪದವಿ ಅಥವಾ ಡಿಪ್ಲೊಮಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಮೊದಲಿಗೆ ಶಾರ್ಟ್‌ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳನ್ನು ಮುಂದಿನ ಹಂತವಾಗಿ ದಾಖಲೆ ಪರಿಶೀಲನೆಗೆ (Document Verification) ಕರೆಯಲಾಗುತ್ತದೆ. ದಾಖಲೆ ಪರಿಶೀಲನೆ ಪ್ರಕ್ರಿಯೆಗೆ ಹಾಜರಾಗಲು ಅಭ್ಯರ್ಥಿಗಳಿಗೆ ಯಾವುದೇ ಪ್ರಯಾಣ ಭತ್ಯೆ (Travelling Allowance) ನೀಡುವುದಿಲ್ಲ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು.