ಕಲಬುರಗಿ, (ಫೆ.19): ಕಲಬುರಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮ ಪಂಚಾಯತ್ ಗಳಲ್ಲಿ ಖಾಲಿ ಇರುವ ವಿವಿಧ ಒಟ್ಟು 44 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ತೆರಿಗೆ ವಸೂಲಿಗಾರರು, ಲೆಕ್ಕಿಗ, ಗುಮಾಸ್ತ, ಬೆರಳಚ್ಚುಗಾರ ವೃಂದದ ಕೋಟಾದಡಿಯಲ್ಲಿ ಸ್ಥಳೀಯ ವೃಂದದಲ್ಲಿ, ಸ್ಥಳೀಯೇತರ ವೃಂದದಲ್ಲಿ ಖಾಲಿ ಇರುವ ಗ್ರೇಡ್-2 ಗ್ರಾಮ ಪಂಚಾಯತ್ ಕಾರ್ಯದರ್ಶಿ ಹುದ್ದೆಗಳು ಮತ್ತು ಸ್ಥಳೀಯೇತರ ವೃಂದದಲ್ಲಿ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

SDA,FDA ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಮಾರ್ಚ್ 2, 2019 ಕೊನೆ ದಿನಾಂಕವಾಗಿದೆ.

ಅರ್ಜಿ ಶುಲ್ಕ ಮತ್ತು ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅರ್ಜಿಯ ಶುಲ್ಕ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ  250 ರೂ. ಹಾಗೂ ಸಾಮಾನ್ಯ ಇತರೆ ಪ್ರವರ್ಗದ ಅಭ್ಯರ್ಥಿಗಳಿಗೆ 500 ರೂ. ಗಳನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಕಲಬುರಗಿ ಇವರ ಹೆಸರಿನಲ್ಲಿ ಪಡೆದ ಪೋಸ್ಟಲ್ ಆರ್ಡರ್ ಸಲ್ಲಿಸಿ, ಜಿಲ್ಲಾ ಪಂಚಾಯತ್ ಕಛೇರಿಯ ಆಡಳಿತ ಶಾಖೆಯಲ್ಲಿ ಕಛೇರಿಯ ಸಮಯದಲ್ಲಿ ಪಾವತಿಸಿ ಅರ್ಜಿ ಪಡೆಯಬಹುದು.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ PUC (SSLC ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾನ್ಯ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ಒಳಪಟ್ಟು ಒಪ್ಪಿ ಅರ್ಜಿ ಸಲ್ಲಿಸುವುದು) ವಿದ್ಯಾರ್ಹತೆಯನ್ನು ಹೊಂದಿರಬೇಕು. 

ಈ ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್ ಸೈಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ. ಇನ್ನು ಹುದ್ದೆ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ. ಈ ಹುದ್ದೆಗಳ ಬಗೆಗೆ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ