ಈ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿ ಆದೇಶಿಸಿದ ಸರ್ಕಾರ!
ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳಿಗೆ ತಡೆ ನೀಡಲು ಹೈಕೋರ್ಟ್ ತಡೆ ನೀಡಿದೆ. ಅಲ್ಲದೇ ಮತದಾರ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ.
ಬೆಂಗಳೂರು, (ಏ.23): ರಾಜ್ಯದ 10 ನಗರ ಸ್ಥಳೀಯ ಸಂಸ್ಥೆಗಳಿಗೆ ಇದೇ ಏಪ್ರಿಲ್ 27ರಂದು ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಖಾಸಗಿ ಅರ್ಹ ಮತದಾರ ನೌಕರರಿಗೆ ವೇತನ ಸಹಿತ ರಜೆ ಘೋಷಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ಏಪ್ರಿಲ್ 27ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಗತ್ಯ ಬಿದ್ದಲ್ಲಿ ಏಪ್ರಿಲ್ 29ರಂದು ಮರು ಮತದಾನ ನಡೆಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಏಪ್ರಿಲ್ 30ರಂದು ಮತ ಎಣಿಕೆ ನಡೆಯಲಿದೆ.
ಕೊರೋನಾ ಆತಂಕದ ಮಧ್ಯೆ ಚುನಾವಣೆ ಪ್ರಚಾರ: ಸಬೂಬು ಹೇಳಿದ ಶ್ರೀರಾಮುಲು
ಬಳ್ಳಾರಿ ಮಹಾನಗರ ಪಾಲಿಕೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ, ಹಾಸನ ಜಿಲ್ಲೆಯ ಬೇಲೂರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮತ್ತು ತೀರ್ಥಹಳ್ಳಿ, ಕೊಡಗು ಜಿಲ್ಲೆಯ ಮಡಿಕೇರಿ, ರಾಮನಗರ ಜಿಲ್ಲೆಯ ರಾಮನಗರ, ಚನ್ನಪಟ್ಟಣ, ಬೀದರ್ ನಗರಸಭೆ, ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿದೆ.
ಚುನಾವಣೆಗಳಿಗೆ ತಡೆ ನೀಡಲು ಹೈಕೋರ್ಟ್ ನಕಾರ
ನಗರಪಾಲಿಕೆ ಚುನಾವಣೆಗಳಿಗೆ ತಡೆ ನೀಡಲು ಹೈಕೋರ್ಟ್ ಸಾಧ್ಯವಿಲ್ಲ ಎಂದು ಹೇಳಿದೆ. ಈ ಸಂಬಂಧ ಆಮ್ ಆದ್ಮಿ ಪಕ್ಷ (ಆಪ್) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಚುನಾವಣೆ ನಡೆಸುವುದು ಆಯೋಗಕ್ಕೆ ಬಿಟ್ಟ ವಿಚಾರ ಎಂದು ಹೈಕೋರ್ಟ್ ತನ್ನ ನಿಲುವು ಸ್ಪಷ್ಟಪಡಿಸಿದೆ.
ಸಂವಿಧಾನದ ಚೌಕಟ್ಟಿನಲ್ಲಿ, ನಿರ್ದಿಷ್ಟ ಅವಧಿಯೊಳಗೆ ಚುನಾವಣೆ ನಡೆಯಬೇಕು. ಈಗ ಹಲವು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಕರ್ನಾಟಕದಲ್ಲೂ ಉಪ ಚುನಾವಣೆ ನಡೆದಿದೆ. ಚುನಾವಣೆಯನ್ನು ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಚುನಾವಣಾ ಆಯೋಗವೇ ತೀರ್ಮಾನಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.