ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ: ಸಂದರ್ಶನ ಮೂಲಕ ಆಯ್ಕೆ
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ವವಸ್ಥಾಪನಾಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಇದರ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಸೆ.15): ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 10 ಅರಣ್ಯ ವವಸ್ಥಾಪನಾಕಾರಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ ಅಕ್ಟೋಬರ್ 1, 2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಬರೋಬ್ಬರಿ 12075 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ವಯೋಮಿತಿ : ಆಗಸ್ಟ್ 20,2019ರ ಅನ್ವಯ ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಹತೆಗಳು:
* ಅರ್ಜಿದಾರರು ಸಹಾಯಕ ಆಯುಕ್ತರು (ಕಂದಾಯ) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರಬೇಕು .
* ಅರಣ್ಯ ಯೋಜನೆ ಹಾಗೂ ಗಡಿರೇಖೆ ಗುರುತಿಸುವಿಕೆ ಮತ್ತು ನಕಾಶೆ ತಯಾರಿಕೆ.
* ಭೂ ವಿವಾದಗಳ ಕುರಿತಂತೆ ಸಿವಿಲ್ ನ್ಯಾಯಾಲಯದಂತೆ ಕರ್ತವ್ಯ ನಿರ್ವಹಿಸಬೇಕು.
* Theodolits Survey ಮತ್ತು GPS Survey ಪರಿಣಿತರಾಗಿರಬೇಕು.
ವೇತನ ಶ್ರೇಣಿ: ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ ವೇತನ 50,000 ರೂ. ನೀಡಲಾಗುವುದು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ ? : ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನೊಂದಾಯಿತ ಅಂಚೆ ಮುಖಾಂತರ ಹಾಗೂ ಖುದ್ದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಮುಖ್ಯಸ್ಥರು ಅರಣ್ಯ ಪಡೆ), ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು 560003 ರವರ ಕಛೇರಿಗೆ ದಿನಾಂಕ : 03.09.2019 ರಿಂದ 1.10.2019 ರಂದು 4:30 ಗಂಟೆಯವರೆಗೆ ಸಲ್ಲಿಸಬಹುದು.
ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ