ಕರ್ನಾಟಕ ಅರಣ್ಯ ಇಲಾಖೆಯಲ್ಲಿ 750 ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ ಪ್ರಕಟಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಮತ್ತು ನವೆಂಬರ್ 15ರ ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಅರಣ್ಯ ಇಲಾಖೆಯಲ್ಲಿ (KFD) ಕೆಲಸ ಮಾಡಲು ಕಾಯುತ್ತಿದ್ದ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಭರ್ಜರಿ ಸಿಹಿ ಸುದ್ದಿ. 10ನೇ ತರಗತಿ ಪಾಸಾಗಿದ್ದವರಿಗೆ ಬರೋಬ್ಬರಿ 750 ಅರಣ್ಯ ವೀಕ್ಷಕ (Forest Watcher) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಹುದ್ದೆಗಳ ಸಂಪೂರ್ಣ ವಿವರ:

ಸಂಸ್ಥೆಯ ಹೆಸರು: ಕರ್ನಾಟಕ ಅರಣ್ಯ ಇಲಾಖೆ (KFD)

ಹುದ್ದೆಯ ಹೆಸರು: ಅರಣ್ಯ ವೀಕ್ಷಕರು (Forest Watcher)

ಒಟ್ಟು ಹುದ್ದೆಗಳು: 750

ಉದ್ಯೋಗ ಸ್ಥಳ: ಕರ್ನಾಟಕದಾದ್ಯಂತ

ವಿದ್ಯಾರ್ಹತೆ:

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ (SSLC) ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು.

ಸಾಮಾನ್ಯ ಅಭ್ಯರ್ಥಿಗಳು (GM): ಗರಿಷ್ಠ 30 ವರ್ಷ.

ಇತರೆ ಹಿಂದುಳಿದ ವರ್ಗಗಳು (2ಎ, 2ಬಿ, 3ಎ, 3ಬಿ): ಗರಿಷ್ಠ 32 ವರ್ಷ.

ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 (ಎಸ್‌ಸಿ /ಎಸ್‌ಟಿ): ಗರಿಷ್ಠ 35 ವರ್ಷ.

ಆಯ್ಕೆ ಪ್ರಕ್ರಿಯೆ:

ದೈಹಿಕ ಪರೀಕ್ಷೆ

ವೈದ್ಯಕೀಯ ಪರೀಕ್ಷೆ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: ಆಗಸ್ಟ್ 1-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್‌ 15-11-2026

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ಕಿಲ್ಡ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ

ಕರ್ನಾಟಕದ ಕೋಲಾರದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು 2026-27ನೇ ಶೈಕ್ಷಣಿಕ ವರ್ಷಕ್ಕೆ 5 ತಾತ್ಕಾಲಿಕ ಸೂಪರ್ ಸ್ಕಿಲ್ಡ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:

ಸಂಸ್ಥೆ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ

ಹುದ್ದೆಯ ಹೆಸರು: ಸೂಪರ್ ಸ್ಕಿಲ್ಡ್ ಅಸಿಸ್ಟೆಂಟ್

ಒಟ್ಟು ಹುದ್ದೆಗಳು: 5

ಮಾಸಿಕ ವೇತನ: ₹35,000

ಕೆಲಸದ ಸ್ಥಳ: ಕೋಲಾರ, ಕರ್ನಾಟಕ

ವಿದ್ಯಾರ್ಹತೆ:

ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಟೆಕ್/ಬಿಇ, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು.

ವೇತನ ಎಷ್ಟು?

ಈ ನೇಮಕಾತಿಯಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹35,000 ವೇತನ ನೀಡಲಾಗುತ್ತದೆ.

ವಯೋಮಿತಿ:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಪ್ರಕಾರ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ:

ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

-ಮೊದಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

- ನೇಮಕಾತಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

- ಅರ್ಜಿ ನಮೂನೆಯಲ್ಲಿ ಕೇಳಿರುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ.

- ಅಗತ್ಯ ದಾಖಲೆಗಳ ಎರಡು ಪ್ರತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ.

- ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 16, 2026ರ ಸಂಜೆ 5 ಗಂಟೆಯೊಳಗೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಕಚೇರಿಗೆ ತಲುಪಿಸಿ.

--ಅರ್ಜಿ ಸಲ್ಲಿಸಬೇಕಾದ ವಿಳಾಸ:

ರಿಜಿಸ್ಟ್ರಾರ್,

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ,

ಆಡಳಿತ ಕಚೇರಿ, ಶ್ರೀ ದೇವರಾಜ್ ಉರ್ಸ್ ಲೇಔಟ್,

ತಮಕಾ, ಕೋಲಾರ – 563103.