Asianet Suvarna News Asianet Suvarna News

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅನುಮತಿ : ಎಷ್ಟು ಹುದ್ದೆಗಳಿಗೆ ನೇಮಕಾತಿ?

  • ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ  ಅತಿಥಿ ಉಪನ್ಯಾಸಕರ ನೇಮಕ
  •  2021-22ನೇ ಶೈಕ್ಷಣಿಕ ಸಾಲಿನ ಅವಶ್ಯಕತೆಗೆ ಅನುಗುಣವಾಗಿ 14,106 ಅತಿಥಿ ಉಪನ್ಯಾಸಕರನ್ನು ನೇಮಕ 
karnataka Govt Approves guest Lecturer appointment snr
Author
Bengaluru, First Published Oct 28, 2021, 8:32 AM IST

 ಬೆಂಗಳೂರು (ಅ.28):  ಕಾಲೇಜು ಶಿಕ್ಷಣ ಇಲಾಖೆಯ (College education Department) ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (Govt Colleges) 2021-22ನೇ ಶೈಕ್ಷಣಿಕ ಸಾಲಿನ  ಅವಶ್ಯಕತೆಗೆ ಅನುಗುಣವಾಗಿ 14,106 ಅತಿಥಿ ಉಪನ್ಯಾಸಕರನ್ನು (Guest Lecturers) ನೇಮಕ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.

ಹೊಸದಾಗಿ ನೇಮಕ ಮಾಡುವ ಬದಲಾಗಿ ಈ ಹಿಂದೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಕಾಲೇಜಿನ ಹಂತದಲ್ಲಿ ಅರ್ಜಿ ಪಡೆದು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ವಿಷಯಗಳ ವಿಭಾಗದ ಮುಖ್ಯಸ್ಥರು, ಹಿರಿಯ ಅಧ್ಯಾಪಕರು, ಆಡಳಿತ ವಿಭಾಗದ ಅಧಿಕಾರಿ, ಸಿಬ್ಬಂದಿ ವರ್ಗದವರನ್ನೊಳಗೊಂಡ ಆಯ್ಕೆ ಸಮಿತಿ ಪರಿಶೀಲಿಸಿ ನೇಮಕ ಮಾಡಿಕೊಳ್ಳಬೇಕು. 1,3 ಮತ್ತು 5ನೇ ಸೆಮಿಸ್ಟರ್‌ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ (Post Graduation) ತರಗತಿಗಳಲ್ಲಿನ ಕಾರ್ಯಭಾರಕ್ಕನುಗುಣವಾಗಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ.

2008ಕ್ಕೆ ಮುನ್ನ ನೇಮಕವಾದ ಪಿಯು ಬೋಧಕರಿಗೆ ಬಿಇಡಿ ಕಡ್ಡಾಯವಲ್ಲ

ಮಾನದಂಡಗಳೇನು?:  ಅಭ್ಯರ್ಥಿಗಳು 2 ವರ್ಷ ಸ್ನಾತಕೋತ್ತರ ಪದವಿಯಲ್ಲಿಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಶೇ.25 ಅನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಪಿಎಚ್‌.ಡಿ ವಿದ್ಯಾರ್ಹತೆ, ಎನ್‌ಇಟಿ/ ಕೆ-ಸೆಟ್‌, ಎಸ್‌ಎಲ್‌ಇಟಿ (SLET) ವಿದ್ಯಾರ್ಹತೆ, ಎಂ.ಫಿಲ್‌ (MPhil) ವಿದ್ಯಾರ್ಹತೆ, ಹಿಂದಿನ ವರ್ಷಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ನೀಡಲಾಗುವುದು. ವಿಕಲಚೇತನ ಅಭ್ಯರ್ಥಿಗಳಿಗೆ 10 ಅಂಕಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ತಿಳಿಸಲಾಗಿದೆ. ಮಾಹಿತಿಗೆ   ನೋಡಬಹುದು.

ಅತಿಥಿ ಉಪನ್ಯಾಸಕರ ಕಾಯಂಗೆ ಆಗ್ರಹಿಸಿ ಪ್ರತಿಭಟನೆ

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ತಡೆಹಿಡಿದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ವಿಲೀನಗೊಳಿಸುವ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಪದಾಧಿಕಾರಿಗಳು   ಪ್ರತಿಭಟಿಸಿದರು.

3,500 ಪೇದೆ ಹುದ್ದೆಗೆ 3.5 ಲಕ್ಷ ಜನ ಪರೀಕ್ಷೆ..!

 ಪ್ರತಿಭಟಿಸಿದ ಅತಿಥಿ ಉಪನ್ಯಾಸಕರು, ಮಾನ್ಯ ಸಭಾಪತಿಗಳಾದ ಬಸವರಾಜ ಹೊರಟ್ಟಿ(Basavaraja Horatti) ನೇತೃತ್ವದಲ್ಲಿ ಉನ್ನತ ಶಿಕ್ಷಣ ಸಚಿವರು (Education Minister) ಮತ್ತು ಇಲಾಖೆಯ ಅಧಿಕಾರಿಗಳೊಡನೆ ಚರ್ಚಿಸಲಾಗಿದೆ. ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಗೆ ಶಾಶ್ವತ ನಿಯಮಾವಳಿ ರಚಿಸಿ ಸೇವೆ ಕಾಯಂಗೊಳಿಸುವ ಕುರಿತು ಪ್ರಸ್ತಾವನೆಯನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಮಂಡಿಸಿ ಇತ್ಯರ್ಥಗೊಳಿಸಲು ಅಥವಾ ಸಚಿವ ಸಂಪುಟದ ಅನುಮತಿಗೆ ಸಲ್ಲಿಸಲು ಸಿಎಂ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಪ್ರತಿನಿಧಿ ಡಾ.ಜಿ. ಶ್ಯಾಮಲಾ, ಹನುಮಂತೇಶ್‌, ಓ. ಬಾಲಸುಬ್ರಮಣ್ಯಂ, ಡಾ.ಜಿ. ಮಹೇಶ್‌, ಡಾ.ಆರ್‌. ಅನಿಲಕುಮಾರ್‌, ಅನಂತ್‌ಕುಮಾರ್‌ ಇದ್ದರು.

ಸೇವಾ ಭದ್ರತೆಗೆ ಆಗ್ರಹ

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲದಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಅತ್ಯವಶ್ಯಕವಾಗಿದೆ. ಆದ್ದರಿಂದ ಪ್ರಸಕ್ತ ಅಧಿವೇಶನದಲ್ಲಿಯೇ ಸೇವಾ ಭದ್ರತೆ ಘೋಷಣೆ ಮಾಡಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷ ರಾಜು ಕುಂಬಾರ ಆಗ್ರಹಿಸಿದರು.

 ರಾಜ್ಯದ ಸುಮಾರು 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14564 ಅತಿಥಿ ಉಪನ್ಯಾಸಕರು ಕಳೆದ ಹತ್ತು ವರ್ಷಗಳಿಗಿಂತಲೂ ಹೆಚ್ಚಿಗೆ ಸಮಯ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಇದುವರೆಗೆ ನೂರಾರು ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಘೋಷಣೆ ಮಾಡಿಲ್ಲ. ಇದರಿಂದಾಗಿ ನೂರಾರು ಅತಿಥಿ ಉಪನ್ಯಾಸಕರ ಬದುಕು ಅತಂತ್ರ ಸ್ಥಿತಿಯಲ್ಲಿದೆ. ಕೆಲವರ ವಯೋಮಿತಿ ಮೀರಿ ಹೋಗಿದೆ. ಸರ್ಕಾರ ಬರುವ ದಿನಗಳಲ್ಲಿ ಸೇವೆಯನ್ನು ಕಾಯಂಗೊಳಿಸುತ್ತಾರೆ ಎಂಬ ಆತ್ಮವಿಶ್ವಾಸದೊಂದಿಗೆ ಅತಿಥಿ ಉಪನ್ಯಾಸಕರು ಹಾಗೂ ಕುಟುಂಬಗಳು ದಿನ ಕಳೆಯುತ್ತಿವೆ ಎಂದರು.

ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಲು ಸರ್ಕಾರ ಯೋಚಿಸುತ್ತಿದೆ. ಅತಿಥಿ ಉಪನ್ಯಾಸಕರು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ವ್ಯವಸ್ಥೆಯ ಒಂದು ಭಾಗವಾಗೇಕು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆಯಿಂದ ಯಾವುದೇ ಸೇವಾಭದ್ರತೆ ಇಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹಾಗೂ ಅವರ ಕುಟುಂಬಗಳಿಗೆ ಉದ್ಯೋಗ ಸೇವಾ ಭದ್ರತೆ ದೊರೆಯಬಹುದೆಂಬ ಆಶಾಭಾವನೆ ಮೂಡಿದೆ. ಆದ್ದರಿಂದ ಪ್ರಸಕ್ತ ಅಧಿವೇಶನದಲ್ಲಿಯೇ ಸೇವಾ ಭದ್ರತೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ನಿಂಗಪ್ಪ ಸಂಗ್ರೇಜಿಕೊಪ್ಪ, ವಿಠಲ ಮಾಳವದೆ, ಡಾ. ಜಯಶ್ರೀ ಹಂಚಿನಮನಿ, ಪ್ರಕಾಶ ಮಬನೂರ ಸೇರಿ ಅನೇಕರಿದ್ದರು.

Follow Us:
Download App:
  • android
  • ios