ಕರ್ನಾಟಕ ಲೋಕಾಯುಕ್ತವು 25 ಕ್ಲರ್ಕ್ ಮತ್ತು ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ 67,600 ರೂ. ವರೆಗೆ ವೇತನ ನೀಡಲಾಗುತ್ತದೆ.

ಕರ್ನಾಟಕ ಲೋಕಾಯುಕ್ತವು ಖಾಲಿ ಇರುವ ಕ್ಲರ್ಕ್ (ಗುಮಾಸ್ತ) ಮತ್ತು ಟೈಪಿಸ್ಟ್ (ಬೆರಳಚ್ಚುಗಾರ) ಹುದ್ದೆಗಳ ಭರ್ತಿಗೆ ಅಧಿಕೃತ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಸಬಹುದು.

ಹುದ್ದೆಗಳ ವಿವರ:

ಸಂಸ್ಥೆಯ ಹೆಸರು: ಕರ್ನಾಟಕ ಲೋಕಾಯುಕ್ತ

ಒಟ್ಟು ಹುದ್ದೆಗಳ ಸಂಖ್ಯೆ: 25

ಹುದ್ದೆಯ ಹೆಸರು: ಕ್ಲರ್ಕ್ ಮತ್ತು ಟೈಪಿಸ್ಟ್

ಉದ್ಯೋಗ ಸ್ಥಳ: ಬೆಂಗಳೂರು (ಕರ್ನಾಟಕ)

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಿಯುಸಿ ಪೂರ್ಣಗೊಳಿಸಿರಬೇಕು.

ವೇತನ:

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 34,100-67,600 ರು. ವರೆಗೆ ವೇತನವನ್ನು ನೀಡಲಾಗುತ್ತದೆ

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

2A, 2B, 3A, 3B ಅಭ್ಯರ್ಥಿಗಳಿಗೆ: 3 ವರ್ಷ

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ

ಅರ್ಜಿ ಶುಲ್ಕದ ವಿವರ

ಕ್ಯಾಟ್ 2A, 2B, 3A, 3B, ಮಾಜಿ ಸೇವಾ ಅಭ್ಯರ್ಥಿಗಳಿಗೆ: 250

ಎಸ್‌ಸಿ/ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಮೆರಿಟ್ ಪಟ್ಟಿ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ:

ಮೊದಲು ಕರ್ನಾಟಕ ಲೋಕಾಯುಕ್ತದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಕೆಳಗಿನ ಲಿಂಕ್ ಬಳಸಿ.

https://lokayukta.karnataka.gov.in/onlinerecruitment/ctk/home.php

ನೇಮಕಾತಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಕೇಳಲಾದ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

ನಿಮ್ಮ ಇತ್ತೀಚಿನ ಛಾಯಾಚಿತ್ರ ಮತ್ತು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.

ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.

ಕೊನೆಯದಾಗಿ, ಎಲ್ಲವನ್ನೂ ಮರುಪರಿಶೀಲಿಸಿ ‘Submit’ ಬಟನ್ ಒತ್ತಿ. ಮುಂದಿನ ಉಲ್ಲೇಖಕ್ಕಾಗಿ ಅಪ್ಲಿಕೇಶನ್ ಫಾರ್ಮ್ ಅನ್ನು ಪ್ರಿಂಟ್ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: ಜುಲೈ 17-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 17-2026