ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KRIES) 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ನೇಮಕಾತಿಯನ್ನು ನಡೆಸುತ್ತಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KRIES) ವತಿಯಿಂದ ಖಾಲಿ ಇರುವ ಬೃಹತ್ ಸಂಖ್ಯೆಯ ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ನೇಮಕಾತಿಯನ್ನು ನಡೆಸುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ:
ಸಂಸ್ಥೆಯ ಹೆಸರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KRIES)
ನೇಮಕಾತಿ ಸಂಸ್ಥೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಒಟ್ಟು ಹುದ್ದೆಗಳು: 1,087
ಹುದ್ದೆಯ ಹೆಸರು: ಶಿಕ್ಷಕರು
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಗಳ ವರ್ಗೀಕರಣ:
ಶಿಕ್ಷಕರು (ಕಲ್ಯಾಣ ಕರ್ನಾಟಕ – KK): 320 ಹುದ್ದೆಗಳು
ಶಿಕ್ಷಕರು (ಉಳಿಕೆ ಮೂಲ ವೃಂದ – RPC): 767 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪದವಿ (Graduation), ಬಿಎ (BA), ಅಥವಾ ಬಿಎಸ್ಸಿ (B.Sc), ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ:
ಕನಿಷ್ಠ ವಯಸ್ಸು: 18 ವರ್ಷಗಳು
ಗರಿಷ್ಠ ವಯಸ್ಸು: 45 ವರ್ಷಗಳು
ವಯೋಮಿತಿ ಸಡಿಲಿಕೆ:
ಒಬಿಸಿ, 2A, 2B, 3A, 3B ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PWD (ವಿಕಲಚೇತನ) ಅಭ್ಯರ್ಥಿಗಳಿಗೆ: 10 ವರ್ಷ
ಮಾಸಿಕ ವೇತನ:
49,050 ರಿಂದ-99,400 ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ:
ಸಾಮಾನ್ಯ, OBC, 2A, 2B, 3A, 3B ಅಭ್ಯರ್ಥಿಗಳಿಗೆ: 750 ರು.
ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ: 500 ರು.
ಪಾವತಿ ವಿಧಾನ: ಆನ್‌ಲೈನ್ ಮೂಲಕ
ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಲಿಖಿತ ಪರೀಕ್ಷೆ: ಪತ್ರಿಕೆ-1 ಮತ್ತು ಪತ್ರಿಕೆ-2 (OMR ಆಫ್‌ಲೈನ್ ಮಾದರಿ)
ಸಹಿಷ್ಣುತೆ ಪರೀಕ್ಷೆ ಮತ್ತು ದೈಹಿಕ ಗುಣಮಟ್ಟ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವ ಮುನ್ನ KEA ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ನಿಮ್ಮ ಸರಿಯಾದ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಹಾಗೂ ಐಡಿ ಪ್ರೂಫ್, ಶೈಕ್ಷಣಿಕ ದಾಖಲೆಗಳು, ರೆಸ್ಯೂಮ್ ಮತ್ತು ಫೋಟೋಗಳನ್ನು ಸ್ಕ್ಯಾನ್ ಮಾಡಿ ಸಿದ್ಧವಾಗಿಟ್ಟುಕೊಳ್ಳಿ.
ವೆಬ್‌ಸೈಟ್‌ನಲ್ಲಿ ನೀಡಲಾದ KRIES ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ, ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ನಿಮ್ಮ ಪ್ರವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭವಾಗುವ ದಿನಾಂಕ: ಜುಲೈ 15-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 13-2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್ 14-2026


