ಬೆಂಗಳೂರು, (ಫೆ.23): ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವಿವಿಧ ವಿಭಾಗಗಳಲ್ಲಿ ಖಾಲಿರುವ  ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೆಸ್ಕಾಂ, ಸೆಸ್ಕ್, ಹೆಸ್ಕಾಂ, ಮೆಸ್ಕಾಂ, ಜೆಸ್ಕಾಂ ನಲ್ಲಿ ಖಾಲಿ ಇರುವ ಸಹಾಯಕ ಕಾರ್ಯನಿರ್ವಾಹಕ, ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕಿರಿಯ ಆಪ್ತ ಸಹಾಯಕ, ಕಿರಿಯ ಸಹಾಯಕ, ಚಾಲಕ, ಕಿರಿಯ ಪವರ್ ಮ್ಯಾನ್ ಸೇರಿದಂತೆ ವಿವಿಧ ಒಟ್ಟು 3646 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಫೆಬ್ರವರಿ 22,2019ರಿಂದ ಅರ್ಜಿಗಳು ಪ್ರಾರಂಭವಾಗಿದ್ದು,  ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೊನೆ ದಿನಾಂಕ ಮಾರ್ಚ್ 30,2019ರೊಳಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

SDA,FDA ಹುದ್ದೆಗಳ ನೇಮಕಾತಿಗೆ KPSC ಅರ್ಜಿ ಆಹ್ವಾನ

ಆಯ್ಕೆ ವಿಧಾನ: ಮೇಲೆ ತಿಳಿಸಲಾಗಿರುವ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಗಳನ್ನು ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ: 12ನೇ ತರಗತಿ (ದ್ವಿತೀಯ ಪಿಯುಸಿ) ಹಾಗೂ ಯಾವುದಾದರೂ ಪದವಿ ಪೂರ್ಣಗೊಳಿಸಬೇಕು.

ಹೆಚ್ಚಿನ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ. ಅಥವಾ ನೇರವಾಗಿ ಆದೇಶ ಪ್ರತಿಗಾಗಿ ಇಲ್ಲಿ ಕ್ಲಿಕ್ ಮಾಡಿ.