Recruitment 2019: 8500 ಹುದ್ದೆಗಳಿಗೆ LIC ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ 8,500 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 1,2019ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

LIC recruitment 2019 Apply Fo 8500 assistant posts

ಬೆಂಗಳೂರು, (ಸೆ.19): ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) 8,500 ಸಹಾಯಕ (ಅಸಿಸ್ಟೆಂಟ್) ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 01.10.2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್‌ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಹಾಯಕ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ : ಸೆಪ್ಟೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ.

ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,435 ರಿಂದ 40,080 ರು. ವೇತವನ್ನು  ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ :  ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 510 ರು. ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 85 ರು ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ : ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು : 
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 17.9.2019 
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 1.10.2019 
ಆನ್‌ಲೈನ್ ಪರೀಕ್ಷೆ ದಿನಾಂಕ-ಪ್ರಿಲಿಮಿನರಿ : 21 ಮತ್ತು 22ರ ಅಕ್ಟೋಬರ್ 2019 

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

Latest Videos
Follow Us:
Download App:
  • android
  • ios