Asianet Suvarna News Asianet Suvarna News

ನಮ್ಮ ಮೆಟ್ರೋದಲ್ಲಿ ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ, ತಿಂಗಳಿಗೆ 2 ಲಕ್ಷ ರೂ ವೇತನ!

ನಮ್ಮ ಮೆಟ್ರೋ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಜನರಲ್ ಮ್ಯಾನೇಜರ್ ಸೇರಿದಂತೆ ಕೆಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಹುದ್ದೆ, ವೇತನ ಸೇರಿದಂತೆ ಇತರ ಮಾಹಿತಿ ಇಲ್ಲಿದೆ.
 

Namma metro recruitment 2024 BMRCL hiring applicant to fill general managers post ckm
Author
First Published Sep 4, 2024, 8:28 PM IST | Last Updated Sep 4, 2024, 8:31 PM IST

ಬೆಂಗಳೂರು(ಸೆ.04) ನಮ್ಮ ಮೆಟ್ರೋ ಇದೀಗ ನೇಮಕಾತಿ ಆರಂಭಿಸಿದೆ. ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್, ಸಿಗ್ನಲ್ ಮ್ಯಾನೇಜರ್ ಸೇರಿದಂತೆ ಕಲ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಸೆಪ್ಟೆಂಬರ್ 25 ಆನ್ ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ತಿಂಗಳಿಗೆ 2,06,250 ರೂಪಾಯಿ ಸಂಬಳ ಪಡೆಯಲಿದ್ದಾರೆ. 

5 ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಜನರಲ್ ಮ್ಯಾನೇಜರ್( ಕಾಂಟ್ರಾಕ್ಟ್/ ಸ್ಟೋರ್) ಜನರಲ್ ಮ್ಯಾನೇಜರ್ (ಟ್ರಾಕ್ಷನ್), ಜನರಲ್ ಮ್ಯಾನೇಜರ್(ಪಿ ವೇ) ಹಾಗೂ ಜನರಲ್ ಮ್ಯಾನೇಜರ್ (ಸಿಗ್ನಲಿಂಗ್) ಹುದ್ದೆಗಳಿಗ ನೇಮಕಾತಿ ನಡೆಯಲಿದೆ. ಗರಿಷ್ಠ ವಯೋಮತಿ ಕಾಂಟ್ರಾಕ್ಟ್ ಹುದ್ದೆಗೆ 58 ವರ್ಷ ಹಾಗೂ ಡೆಪ್ಯೂಟೇಶನ್‌ಗೆ 55 ವರ್ಷ ನಿಗದಿಪಡಿಸಲಾಗಿದೆ.

ಡಿಜಿ ಲಾಕರ್ ಆ್ಯಪ್ ಬಳಸುವವರಿಗೆ ಗುಡ್ ನ್ಯೂಸ್, ರೈಲ್ವೇ ಉದ್ಯೋಗ ಪಡೆಯುವುದು ಸುಲಭ!

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ತಿಂಗಳ ವೇತನ ಸಿಗಲಿದೆ. ಇನ್ನು ಅರ್ಹತೆ ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯೂನಿಕೇಷನ್, ಮೆಕಾನಿಕಲ್, ಸಿವಿಲ್ ಎಂಜಿನೀಯರಿಂಗ್ ಪದವಿ, ಕಂಪ್ಯೂಟರ್ ಸೈನ್ಸ್, ಟೆಲಿಕಮ್ಯೂನಿಕೇಶನ್ ಪದವಿಯಲ್ಲಿ ಯಾವುದಾದರು ಪದವಿ ಹೊಂದಿರಬೇಕು. 

ಆಯ್ಕೆಯಾದ ಅಭ್ಯರ್ಥಿಗಳು ಆರಂಭಿಕ ಮೂರು ವರ್ಷ ಕಾಂಟ್ರಾಕ್ಟ್‌ನಲ್ಲಿ ಕೆಲಸ ಮಾಡುತ್ತಾರೆ. ಬಳಿಕ ಅವರ ಪರ್ಫಾಮೆನ್ಸ್ ಆಧಾರದಲ್ಲಿ ಮುಂದಿನ ನಿರ್ಧಾರವನ್ನು ನಮ್ಮ ಮೆಟ್ರೋ ಸಂಸ್ಥೆ ತೆಗೆದುಕೊಳ್ಳಲಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ವರ ಆ್ಯಪ್ಲಿಕೇಶನ್ ಹಾಗೂ ದಾಖಲೆ ಪರೀಶಿಲಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್ ಮಾಡಿದವರನ್ನು ಮಾತ್ರ ಸಂದರ್ಶನಕ್ಕೆ ಕರೆಯಲಾಗುತ್ತದೆ.

ವಿದ್ಯಾರ್ಹತೆ ಜೊತೆಗೆ ಕನ್ನಡ ಭಾಷೆಗೂ ಆದ್ಯತೆ ನೀಡಲಾಗಿದೆ. ಇನ್ನು ರಾಜಕೀಯ ಅಥವಾ ಇನ್ಯಾವುದೇ ಮೂಲಗಳಿಂದ ನೇಮಕಾತಿ ಮಾಡುವಂತೆ ಒತ್ತಾಯಿಸಿದರೆ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ಅನರ್ಹ ಮಾಡಲಾಗುತ್ತದೆ. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸೂಕ್ತ ಕ್ಷೇತ್ರದಲ್ಲಿ ಅನುಭವ ಹಾಗೂ ಪ್ರತಿಭಾನ್ವಿತ ಅಭ್ಯರ್ಥಿಗಳನ್ನು ನಮ್ಮ ಮೆಟ್ರೋ ಆಯ್ಕೆ ಮಾಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಐದು ಹುದ್ದೆಗಳಿಗೆ ಸಂದರ್ಶನ ನಡೆಯಲಿದೆ. ಆಯಾ ಹುದ್ದೆಗಳಿಗೆ ವಿದ್ಯಾರ್ಹತೆ, ಅನುಭವ, ಪ್ರತಿಭೆಯ ಆಧಾರದಲ್ಲಿ ಆಯ್ಕೆ ನಡೆಯಲಿದೆ. ನಮ್ಮ ಮೆಟ್ರೋ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಅಸಕ್ತರು ಹಾಗೂ ಅರ್ಹರು ಸೆಪ್ಟೆಂಬರ್ 25ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದು.

ಪಿಯು, ಡಿಗ್ರಿ ಪಾಸಾದವರಿಗೆ ರೈಲ್ವೇಯಲ್ಲಿ 8113 ಹುದ್ದೆ, ಸೆ.14ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭ!
 

Latest Videos
Follow Us:
Download App:
  • android
  • ios