Asianet Suvarna News Asianet Suvarna News

NIT Karnataka Recruitment 2022: ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ನೇಮಕಾತಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ  ಕರ್ನಾಟಕದಲ್ಲಿ  ಖಾಲಿ ಇರುವ  ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ.  ಮೇ.22 ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

National Institute of Technology Recruitment 2022 notification for Junior Research Fellow gow
Author
Bengaluru, First Published Apr 26, 2022, 9:18 AM IST

ಬೆಂಗಳೂರು(ಎ.26): ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology - NIT) ಕರ್ನಾಟಕದಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಸಂಶೋಧನಾ ಅಭ್ಯರ್ಥಿ (Junior Research Fellow)ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ22, 2022ರಂದು ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ  ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ https://www.nitk.ac.in/ ಗೆ ಭೇಟಿ ನೀಡಬಹುದು. ಅಥವಾ debashree@nitk.edu.in ಈ ಮೇಲ್‌ ಮಾಡುವ ಮೂಲಕ ತಿಳಿದುಕೊಳ್ಳಬಹುದು. ಅಥವಾ ದೂರವಾಣಿ ಸಂಖ್ಯೆ: 91-824-2474000 (ext.3212), 7022504322 ಈ ನಂಬರ್ ಗೆ ಕರೆ ಮಾಡಿ ತಿಳಿದುಕೊಳ್ಳಬಹುದು. 

ಶೈಕ್ಷಣಿಕ ವಿದ್ಯಾರ್ಹತೆ:  ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ/ ಯಿಂದ ಹುದ್ದೆಗಳಿಗನುಗುಣವಾಗಿ ME, M.Tech, BE  ವಿದ್ಯಾರ್ಹತೆಯನ್ನು  ಪಡೆದಿರಬೇಕು.

ವಯೋಮಿತಿ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ   ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ 28 ವರ್ಷದ ಒಳಗೆ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Bank of India Recruitment 2022 ವಿವಿಧ 696 ಅಧಿಕಾರಿ ಹುದ್ದೆಗಳಿಗೆ ನೇಮಕಾತಿ

ವೇತನ ವಿವರ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ₹31,000 ಸಿಗಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಮಂಗಳೂರಿನ ಸುರತ್ಕಲ್‌ ನಲ್ಲಿದ್ದು, ಆಸಕ್ತರು ಈ ಕೆಳಗಿನ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. 
ಡಾ. ದೇಬಶ್ರೀ ಚಕ್ರವರ್ತಿ, ಸಹಾಯಕ ಪ್ರಾಧ್ಯಾಪಕರು
ರಸಾಯನಶಾಸ್ತ್ರ ವಿಭಾಗ, ವಿಜ್ಞಾನ ಬ್ಲಾಕ್
National Institute Of Technology Karnataka
Surathkal, Mangaluru-575 025, Karnataka, India.

Patna Abhishek Amazon Offer ಪಾಟ್ನಾ ವಿದ್ಯಾರ್ಥಿಗೆ ದಾಖಲೆಯ ₹1.8 ಕೋ ಆಫರ್! 

Karnataka Teacher Recruitment 2022 5 ಸಾವಿರ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ: ರಾಜ್ಯ ಸರ್ಕಾರಿ ಶಾಲೆಗಳಲ್ಲಿನ (Government Schools) 6ರಿಂದ 8ನೇ ತರಗತಿಗಳಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ (Teacher Recruitment)  ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಏಪ್ರಿಲ್ 26 ಕೊನೆಯ ದಿನವಾಗಿದೆ. ಅರ್ಹ ಅಭ್ಯರ್ಥಿಗಳು ಮಾ.23ರಿಂದ ಏ.22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.  ಅದರಂತೆ ಕೆಲವು ಅಭ್ಯರ್ಥಿಗಳು ಇಲಾಖಾ ವೆಬ್‌ಸೈಟ್‌ www.schooleducation.kar.nic.in ನಲ್ಲಿ ಕೇವಲ ರಿಜಿಸ್ಟ್ರೇಷನ್‌ ಮಾತ್ರ ಮಾಡಿಕೊಂಡಿದ್ದು, ಅರ್ಜಿಯಲ್ಲಿ ವಿವರಗಳನ್ನು ಭರ್ತಿ ಮಾಡಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ, ಅರ್ಜಿ ತುಂಬಲು ಮತ್ತು ಅರ್ಜಿ ಶುಲ್ಕ ಪಾವತಿಸಲು ದಿನಾಂಕ 26-04-2022 ರವರೆಗೆ ಕಾಲಾವಕಾಶ ನೀಡಲಾಗಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ https://www.schooleducation.kar.nic.in ಮಾತ್ರ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ವರ್ಗದವರಿಗೆ ಪ್ರತಿ ಹುದ್ದೆಗೆ 1250 ರು., ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 625 ರು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ(KARTET) ಅರ್ಹತಾ ಅಂಕ ಗಳಿಸಿರುವ ಅಭ್ಯರ್ಥಿಗಳು ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೇ 21 ಮತ್ತು 22ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಯಲಿದೆ ಎಂದು ಈಗಾಗಲೇ ಶಿಕ್ಷಣ ಇಲಾಖೆ (Department of Education) ಅಧಿಸೂಚನೆಯಲ್ಲಿ ಪ್ರಕಟಿಸಿದೆ.

Follow Us:
Download App:
  • android
  • ios