ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಪ್ರತಿಷ್ಠಿತ ಸಂಸ್ಥೆ ರಾಷ್ಟ್ರೀಯ ಜಲವಿದ್ಯುತ್ ನಿಗಮ ಲಿಮಿಟೆಡ್ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 205 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ NHPC ಲಿಮಿಟೆಡ್ (National Hydroelectric Power Corporation) ಸಂಸ್ಥೆಯು 205 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಹಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ವಿವರಗಳು

ನೇಮಕಾತಿ ಸಂಸ್ಥೆ: ರಾಷ್ಟ್ರೀಯ ಜಲ ವಿದ್ಯುತ್ ನಿಗಮ ಲಿಮಿಟೆಡ್

ಹುದ್ದೆಯ ಹೆಸರು: ಟ್ರೈನಿ ಎಂಜಿನಿಯರ್

ಒಟ್ಟು ಹುದ್ದೆಗಳು: 205

ಉದ್ಯೋಗ ಸ್ಥಳ: ಅಖಿಲ ಭಾರತ

ಮಾಸಿಕ ವೇತನ: ₹50,000–₹1,60,000

ಹುದ್ದೆಯ ಹೆಸರು: ಹುದ್ದೆಗಳ ಸಂಖ್ಯೆ

ಟ್ರೈನಿ ಎಂಜಿನಿಯರ್ (ಸಿವಿಲ್): 64

ಟ್ರೈನಿ ಎಂಜಿನಿಯರ್ (ಎಲೆಕ್ಟ್ರಿಕಲ್): 88

ಟ್ರೈನಿ ಎಂಜಿನಿಯರ್ (ಮೆಕ್ಯಾನಿಕಲ್): 53

ಒಟ್ಟು: 205

ಶೈಕ್ಷಣಿಕ ಅರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.Sc, BE/B.Tech ಪದವಿ ಮುಗಿಸರಬೇಕು.

ವಯೋಮಿತಿ

ಅಭ್ಯರ್ಥಿಗಳು ಗರಿಷ್ಠ ವಯೋಮಿತಿ 30 ವರ್ಷಗಳು ಹೊಂದಿರಬೇಕು.

ಅರ್ಜಿ ಶುಲ್ಕ:

ಅಭ್ಯರ್ಥಿಗಳ ವರ್ಗ: ಅರ್ಜಿ ಶುಲ್ಕ

ಯುಆರ್/ ಇಡಬ್ಲ್ಯೂಎಸ್/ಒಬಿಸಿ (ಎನ್‌ಸಿಎಲ್) ಅಭ್ಯರ್ಥಿಗಳಿಗೆ: ₹708

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಹಿಳೆಯರು/ಮಾಜಿ ಸೈನಿಕರು ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕ ಇಲ್ಲ.

ಆಯ್ಕೆ ಪ್ರಕ್ರಿಯೆ:

ಗೇಟ್-2025 / ಗೇಟ್-2026 ಅಂಕಗಳು (ಅತ್ಯುತ್ತಮ ಅಂಕ)

ಗುಂಪು ಚರ್ಚೆ

ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ

- ಮೊದಲಿಗೆ NHPC ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

-ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ವಿದ್ಯಾರ್ಹತೆ ಮತ್ತು ವಯೋಮಿತಿ ಸರಿಯಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

- ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ, ಅಗತ್ಯವಿರುವ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಯನ್ನು ಭರ್ತಿ ಮಾಡಿ.

- ಅಗತ್ಯ ದಾಖಲೆಗಳು, ಭಾವಚಿತ್ರ ಮತ್ತು ಸಹಿಯನ್ನು ಅಪ್‌ಲೋಡ್ ಮಾಡಿ.

- ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಿ.

ಪ್ರಮುಖ ದಿನಾಂಕಗಳು

ಅರ್ಜಿ ಆರಂಭ ದಿನಾಂಕ: ನವೆಂಬರ್‌ 27-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಡಿಸೆಂಬರ್‌ 26-2026