Nimhans Recruitment 2022: ಹಿರಿಯ ಸಂಶೋಧನಾ ಫೆಲೋ ಸೇರಿ 4 ಹುದ್ದೆಗಳಿಗೆ ನೇಮಕಾತಿ
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ 4 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಮೇ.21 ಕೊನೆಯ ದಿನವಾಗಿದೆ.
ಬೆಂಗಳೂರು (ಮೇ.7): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೀನಿಯರ್ ರಿಸರ್ಚ್ ಫೆಲೋ (Senior Research Fellow) ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ (Project Associate) ಸೇರಿ ಒಟ್ಟು 4 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಮೇ.21 ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟು 4ಹುದ್ದೆಗಳ ಮಾಹಿತಿ ಇಂತಿದೆ:
ಹಿರಿಯ ಸಂಶೋಧನಾ ಫೆಲೋ: 2 ಹುದ್ದೆಗಳು
ಯೋಜನಾ ಸಹಾಯಕ: 2 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ಬಿಎಎಂಎಸ್ ಮಾಡಿರಬೇಕು. ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ (ಲೈಫ್ ಸೈನ್ಸ್ ಮತ್ತು ಯೋಗ) ಬಿ.ಟೆಕ್, ಸ್ನಾತಕೋತ್ತರ ಪದವಿ , BNYS, MBBS, BAMS, ಸ್ನಾತಕೋತ್ತರ ಡಿಪ್ಲೊಮಾ, M.Sc ಮಾಡಿರಬೇಕು.
ಕೆಲಸದ ಅನುಭವ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು 2 ವರ್ಷಗಳ ಸಂಶೋಧನಾ ಅನುಭವವನ್ನು ಹೊಂದಿರಬೇಕು. ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 1 ವರ್ಷದ ಸಂಶೋಧನಾ ಅನುಭವ ಹೊಂದಿರಬೇಕು.
ವಯೋಮಿತಿ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 35 ವರ್ಷದ ಒಳಗಿರಬೇಕು. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ದೊರೆಯಲಿದೆ.
ಹಿರಿಯ ಸಂಶೋಧನಾ ಫೆಲೋ ಹುದ್ದೆಗೆ ₹35000
ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗೆ ₹ 25000 ರಿಂದ ₹31000 ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ: ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಫೆಲೋಶಿಪ್ ಮತ್ತು ಯೋಜನಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ imd.nimhans@gmail.com ಗೆ ಮೇ.21ರ ಮೊದಲು ಅರ್ಜಿ ಸಲ್ಲಿಸಬೇಕು.