ಬೇಸಿಗೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ 4 TMC ನೀರು: ಬಿಎಸ್‌ವೈ ದಿಟ್ಟ ಹೆಜ್ಜೆ

ಬೇಸಿಗೆಗೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ 4 TMC ನೀರು| ಮಹಾರಾಷ್ಡ್ರದಿಂದ ರಾಜ್ಯದ ಕೃಷ್ಣಾ ಮತ್ತು ಭೀಮಾ ನದಿಗೆ 4 ಟಿ.ಎಂ.ಸಿ ನೀರು | ಈ ಬಗ್ಗೆ ರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತಂತೆ ಚರ್ಚೆ ನಡೆದಿದೆ ಎಂದ ಬಿಎಸ್ ವೈ.

4 TMC water for Drinking from Maharashtra to Krishna and Bhima river Says Yediyurappa

ಕಲಬುರಗಿ, [ಅ.17]: ಬೇಸಿಗೆ ಸಂದರ್ಭದಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮಹಾರಾಷ್ಡ್ರದಿಂದ ರಾಜ್ಯದ ಕೃಷ್ಣಾ ಮತ್ತು ಭೀಮಾ ನದಿಗೆ 4 ಟಿ.ಎಂ.ಸಿ ನೀರು ಬಿಡುಗಡೆಗೆ ಅಲ್ಲಿನ ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತಂತೆ ಚರ್ಚೆ ನಡೆಸಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ತಿಳಿಸಿದರು.

ಮಹಾ ಸಿಎಂ ಫಡ್ನವಿಸ್, ಯಡಿಯೂರಪ್ಪ ಕೈಗೊಂಡ ಮಹತ್ವದ ನಿರ್ಧಾರಗಳು

ಬೆಂಗಳೂರಿಗೆ ತೆರಳುವ ಮುನ್ನ ಗುರುವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ತುಬಚಿ ಏತ ನೀರಾವರಿ ಯೋಜನೆಯಿಂದ ಮಹಾರಾಷ್ಟ್ರದ ಬೋರಸಿ ನದಿಗೆ ನೀರಿನ ಲಭ್ಯತೆ ನೋಡಿಕೊಂಡು ಮಹಾರಾಷ್ಡ್ರಕ್ಕೆ ನೀರು ಬಿಡಲು ಆಲೋಚನೆ ನಡೆದಿದ್ದು, ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ. ಮಹಾರಾಷ್ಟ್ರದ ಚುನಾವಣಾ ಪ್ರಚಾರದಲ್ಲಿಯೂ ಸಹ ಇದೇ ಮಾತನ್ನು ಹೇಳಿದ್ದೇನೆ, ಹೀಗಾಗಿ ಯಾವುದೇ ಅಪಾರ್ಥ ಮಾಡಿಕೊಳ್ಳಬಾರದು ಎಂದು ಸ್ಪಷ್ಟನೆ ನೀಡಿದ ಅವರು ಮಹಾರಾಷ್ಟ್ರದಿಂದ 4 ಟಿ.ಎಂ.ಸಿ. ನೀರು ಬಿಡುಗಡೆ ಮಾಡಬೇಕು ಎಂಬುದು ನಮ್ಮ ಹಳೆ ಬೇಡಿಕೆಯಾಗಿದೆ ಎಂದರು.

ಸಾವರ್ಕರ್ ಭಾರತ ರತ್ನಕ್ಕೆ ಜಿದ್ದಾಜಿದ್ದಿ: ಓದಿ ಇಂದಿನ ಟಾಪ್ 10 ಸುದ್ದಿ!

371ಜೆ ಅನ್ವಯ ರಚನೆಗೊಂಡಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆಯಾಗುತ್ತಿದ್ದು, ಇದರ ಸದ್ಬಳಕೆಗೆ ಶೀಘ್ರದಲ್ಲಿಯೇ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುವುದು ಎಂದು ಹೇಳಿದರು.

ಕಲಬುರಗಿ ವಿಮಾನ ನಿಲ್ದಾಣವು ಲೋರ್ಕಾಣೆಗೆ ಸಿದ್ಧಗೊಂಡಿದ್ದು, ಶೀಘ್ರದಲ್ಲಿಯೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ ಮಾಡುವ ಮೂಲಕ ಸಾರ್ವಜನಿಕ ಸೇವೆಗೆ ಅರ್ಪಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸುವ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ, ಮುಂದೆ ನೋಡೋಣ ಎಂದು ಉತ್ತರಿಸಿದರು.

ದೇವಲ ಗಾಣಗಾಪೂರಕ್ಕೆ 10 ಕೋಟಿ ರೂ. 
 ಅಫಜಲಪೂರ ತಾಲೂಕಿನ ದತ್ತನ ಸುಕ್ಷೇತ್ರವಾದ ದೇವಲ ಗಾಣಗಾಪೂರ ಸಮಗ್ರ ಅಭಿವೃದ್ಧಿಗೆ 10 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಘೋಷಿಸಿದಲ್ಲದೆ ಕೂಡಲೆ ಜಿಲ್ಲಾ ಉಸ್ತುವಾರಿ ಸಚಿವರು ಅನುದಾನ ಸದ್ಬಳಕೆಗೆ ಕಾರ್ಯಪ್ರವೃತ್ತರಾಗಬೇಕು ಎಂದರು.

Latest Videos
Follow Us:
Download App:
  • android
  • ios