ಭೀಕರ ಅಪಘಾತ, ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ IAS ಅಧಿಕಾರಿ ಮಹಾಂತೇಶ್ ಬೀಳಗಿ ಸಾವು, ತೀವ್ರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಂತಾಜನಕ ಸ್ಥಿತಿಯಲ್ಲಿ ಬೀಳಗಿ ಮೃತಪಟ್ಟಿದ್ದಾರೆ.
ಕಲಬುರಗಿ (ನ.25) ಜೇವರ್ಗಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ IAS ಅಧಿಕಾರಿ, ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. ರಾಮದುರ್ಗದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರ ತಪ್ಪಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮಹಾಂತೇಶ್ ಬೀಳಗಿ ತೀವ್ರವಾಗಿ ಗಾಯಗೊಂಡರೆ, ಇನ್ನೋವಾ ಕಾರಿನಲ್ಲಿದ್ದ ಇನ್ನಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ಬೀಳಗಿಯನ್ನು ಆಸ್ಪತ್ರೆ ದಾಖಲಿಸಲಿದರೂ ಪ್ರಯೋಜನವಾಗಲಿಲ್ಲ. ಬೀಳಗಿ ಮೃತಪಟ್ಟಿದ್ದಾರೆ.
ಕಲಬುರಗಿ ಖಾಸಗಿ ಆಸ್ಪತ್ಪೆಗೆ ದೌಡಾಯಿಸಿದ ಗಣ್ಯರು
ಜೇವರ್ಗಿ ಬಳಿ ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ತಕ್ಷಣವೇ ಸ್ಥಳೀಯರು ಹಾಗೂ ಇತರ ಸಾವರರು ನಜ್ಜು ಗುಜ್ಜಾದ ವಾಹನದಿಂದ ನಾಲ್ವರನ್ನು ಹೊರತೆಗಿದ್ದಾರೆ. ಬೀಳಗಿ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದರು. ತಕ್ಷಣವೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಆದರೆ ಮಹಾಂತೇಶ್ ಬೀಳಗಿ ಬದುಕುಳಿಯಲಿಲ್ಲ. ಮಾಹಿತಿ ತಿಳಿಯುದ್ದಂತೆ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಪೊಲೀಸ್ ಕಮೀಷನರ್ ಡಾ. ಶರಣಪ್ಪ ಎಸ್ಡಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಮಹಾಂತೇಶ್ ಬೀಳಗಿ ಜೊತೆ ಸಹೋದರ ಸಂಬಂಧಿಗಳು ಸಾವು
ಮಹಾಂತೇಶ್ ಬೀಳಗಿ ಜೊತೆ ಇನ್ನೋವಾ ಕಾರಿನಲ್ಲಿ ಬೀಳಗಿ ಸಹೋದರ ಸಂಬಂಧಿಗಳಾದ ಶಂಕರ್ ಬೀಳಗಿ ಹಾಗೂ ಈರಣ್ಣ ಬೀಳಗಿ ಪ್ರಯಾಣಿಸುತ್ತಿದ್ದರು. ಈ ದುರ್ಘಟೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಇನ್ನೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರಿಗಿಯ ಮಣ್ಣೂರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ನಾಳೆ (ನ.26) ಕಲಬುರಗಿಯಲ್ಲಿ ನಡೆಯಲಿರುವ ಸಂಬಂಧಿಕರ ಮದುವೆಯಲ್ಲಿ ಪಾಲ್ಗೊಳ್ಳಲು ಮಹಾಂತೇಶ ಬೀಳಗಿ ಹಾಗೂ ಅವರ ಸೋದರ ಸಂಬಂಧಿಗಳು ಇನ್ನೋವಾ ಕಾರಿನ ಮೂಲಕ ತೆರಳುವಾಗ ಈ ಘಟನೆ ನಡೆದಿದೆ.
ಬೀಳಗಿ ಮೃತದೇಹ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರ
ಭೀಕರ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಪಾರ್ಥೀವ ಶರೀರವನ್ನು ಕಲಬುರಗಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಲಬುರಗಿಯ ಮಣ್ಣೂರ ಆಸ್ಪತ್ರೆಯಿಂದ ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿ ಸರಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.


