ಮರಾಠಿಗರು ಬಿಜೆಪಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ'

ಮಹಾರಾಷ್ಟ್ರದಲ್ಲಿ ಒಳ್ಳೆಯ ಸ್ಥಿತಿ ಇದೆ, ನಾನು ಸಾಧ್ಯವಾದಷ್ಟು ಪ್ರಮುಖ ಸ್ಥಳದಲ್ಲಿ ಪ್ರಚಾರ ಮಾಡಿದ್ದೇನೆ| ರೈತರು ಸೇರಿದಂತೆ ಜನರು ಮಹಾರಾಷ್ಟ್ರದ ಬಿಜೆಪಿ ಸರ್ಕಾರ ವಿರುದ್ಧ ರೊಚ್ಚಿಗೆದ್ದಿದ್ದಾರೆ ಎಂದ ಮಲ್ಲಿಕಾರ್ಜುನ ಖರ್ಗೆ| ಮುಂಬೈ ಸುತ್ತಮುತ್ತ ಹಾಗೂ ಮಹಾರಾಷ್ಟ್ರದಲ್ಲಿ 2200 ಉದ್ಯಮಗಳು ಮುಚ್ಚಿ ಹೋಗಿವೆ| ಇದರಿಂದ ಅಲ್ಲಿನ ಜನತೆ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ| ಈ ಬಾರಿ ಎನ್‌ಸಿಪಿ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ| ಈ ಬಾರಿ ಮೈತ್ರಿ ಸರ್ಕಾರ ಬರುವ ಸಾಧ್ಯತೆ ಹೆಚ್ಚಿದೆ| 

Maharashtra People Angry on BJP Government

ಕಲಬುರಗಿ(ಅ.19): ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಮಹಾರಾಷ್ಟ್ರದಲ್ಲಿ ಒಳ್ಳೆಯ ಸ್ಥಿತಿ ಇದೆ, ನಾನು ಸಾಧ್ಯವಾದಷ್ಟು ಪ್ರಮುಖ ಸ್ಥಳದಲ್ಲಿ ಪ್ರಚಾರ ಮಾಡಿದ್ದೇನೆ. ರೈತರು ಸೇರಿದಂತೆ ಜನರು ಮಹಾರಾಷ್ಟ್ರದ ಬಿಜೆಪಿ ಸರ್ಕಾರ ವಿರುದ್ಧ ರೊಚ್ಚಿಗೆದ್ದಿದ್ದಾರೆ ಎಂದು ಕಾಂಗ್ರಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. 

ಇಂದು ನಗರದಲ್ಲಿ ಮಾತನಾಡಿದ ಅವರು, ಮುಂಬೈ ಸುತ್ತಮುತ್ತ ಹಾಗೂ ಮಹಾರಾಷ್ಟ್ರದಲ್ಲಿ 2200 ಉದ್ಯಮಗಳು ಮುಚ್ಚಿ ಹೋಗಿವೆ. ಇದರಿಂದ ಅಲ್ಲಿನ ಜನತೆ ಬಿಜೆಪಿ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ಬಾರಿ ಎನ್‌ಸಿಪಿ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ. ಈ ಬಾರಿ ಮೈತ್ರಿ ಸರ್ಕಾರ ಬರುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ. 

ಓಪಿನಿಯನ್ ಪೋಲ್‌ನಲ್ಲಿ ಎಲ್ಲವನ್ನೂ ಕೂಡ ತೋರಿಸುತ್ತಾರೆ. ಅನೇಕ ಉದ್ಯೋಗಪತಿಗಳು ಚಾನೆಲ್‌ಗಳನ್ನು ನಡೆಸುತ್ತಿದ್ದಾರೆ. ಅಪ್ರತ್ಯಕ್ಷವಾಗಿ ಕೆಲವು ಮಾಧ್ಯಮಗಳನ್ನು ಕಂಟ್ರೋಲ್‌ನಲ್ಲಿ ಇಟ್ಟುಕೊಂಡಿದ್ದಾರೆ. ಹೀಗಾಗಿ ಇದರ ಬಗ್ಗೆ ನಾನು ಏನನ್ನು ಹೇಳುವುದಿಲ್ಲ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರದಲ್ಲಿ ಐದು ವರ್ಷಗಳಲ್ಲಿ  ಫಡ್ನವಿಸ್ ಸರ್ಕಾರ ಏನು ಮಾಡಿದೆ ಇದರ ಉತ್ತರ ಕೊಡಿ ಅಂತ ಕೇಳಿದ್ರೂ  ಉತ್ತರ ಕೊಡ್ತಿಲ್ಲ. ರಾಷ್ಟ್ರೀಯ ವಿಷಯದ ಮೇಲೆ ಅವರು ಚುನಾವಣೆ ಮಾಡ್ತಾರೆ, ರಾಜ್ಯದಲ್ಲಿ ಏನು ಮಾಡಿದ್ದಾರೆ ಎಂದು ಹೇಳಿಲ್ಲ ಎಂದು ಹೇಳಿದ್ದಾರೆ. 

ಮಹದಾಯಿ ವಿಚಾರ ನಾವು ಹಿಂದೆ ಅಧಿಕಾರದಲ್ಲಿದ್ದಾಗಲೂ ಚರ್ಚೆ ಮಾಡಿದ್ದೇವೆ. ಗೋವಾಗೆ ಬಹಳಷ್ಟು ನೀರು ಹರಿದು ಹೋಗುತ್ತದೆ. 8 ಟಿಎಂಸಿ ನೀರು ಕೇಳಿದ್ದೇವೆ, ಗೋವಾದವರು ಗಮನ ಹರಿಸುತ್ತಿಲ್ಲ. ಆ ಭಾಗದ ಜನರ ಸಮಸ್ಯೆಯಷ್ಟೇ ಅಲ್ಲ ಇದು ಇಡೀ ರಾಜ್ಯದ ಸಮಸ್ಯೆ. ಇದು ನಮ್ಮ ರಾಜ್ಯದ ಸಮಸ್ಯೆ ಅಂತಾ ಎಲ್ಲರೂ ಪಕ್ಷಾತೀತವಾಗಿ ಸೇರಿ ಇದನ್ನು ಬಗೆಹರಿಸಬೇಕು. ರಾಜ್ಯಪಾಲರು ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಲು ಅವಕಾಶ ಕೊಡಬೇಕು ಎಂದು ತಿಳಿಸಿದ್ದಾರೆ. 
 

Latest Videos
Follow Us:
Download App:
  • android
  • ios