ವಿಜಯಪುರ: ಈ ಬಾರಿ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗಲಿ ದ್ದಾರೆ. 2023 ರಲ್ಲಿ ನಾನು ಮುಖ್ಯಮಂತ್ರಿ ಹುದ್ದೆಯ  ಆಕಾಂಕ್ಷಿ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿಚಾರ ತಿಳಿಸಿದರು.  

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಟೆಂಡರ್‌ ಗಳಲ್ಲಿ ಮೋದಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜಂಟಿಯಾಗಿ ಕಮಿಷನ್ ಹೊಡೆಯುತ್ತಿದ್ದಾರೆ ಎಂದು ದೂರಿದರು. ಪ್ರಧಾನಿ ಮೋದಿ ಅವರು ಸಿದ್ದರಾಮಯ್ಯ ಸರ್ಕಾರವನ್ನು ಕಮಿಷನ್ ಸರ್ಕಾರ ಎಂದು ಕರೆಯುತ್ತಾರೆ.

ಆದರೆ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಟೆಂಡರ್ ಗಳಲ್ಲಿ ಪ್ರಧಾನಿ ಮೋದಿ ಹಾಗೂ ಸಚಿವ ಗಡ್ಕರಿ ಜಂಟಿಯಾಗಿಯೇ ಶೇ.25  ರಷ್ಟು ಕಮಿಷನ್ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು. ಬಸವಣ್ಣ, ಡಾ.ಬಿ.ಆರ್. ಅಂಬೇಡ್ಕರ್ ಅವರು ಬೇರೆ ಬೇರೆಯಲ್ಲ.  

ಬಸವಣ್ಣನವರ ಆಶಯಗಳೇ ಸಂವಿಧಾನಗಳಲ್ಲಿ ಅಡಕವಾಗಿವೆ. ನಮ್ಮ ಶ್ರೇಷ್ಠ ಸಂವಿಧಾನ ದೇಶದ ಹೃದಯವಿದ್ದಂತೆ. ಆದರೆ ಬಿಜೆಪಿಯ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಈ ಹೃದಯವನ್ನೇ ಬದಲಾಯಿಸಲು ಹೊರಟಿದ್ದಾರೆ ಎಂದರು.