ಬಿ.ಎಸ್ ಯಡಿಯೂರಪ್ಪ ಪ್ರತಿಪಕ್ಷ ನಾಯಕ

'BS Yeddyurappa will be Opposition Leader
Highlights

ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಅಲಂಕರಿಸುವುದು ಬಹುತೇಕ ನಿಶ್ಚಿತವಾಗಿದೆ. 

ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನವನ್ನು ರಾಜ್ಯಾಧ್ಯಕ್ಷ ಬಿ.ಎಸ್ .ಯಡಿಯೂರಪ್ಪ ಅವರು ಅಲಂಕರಿಸುವುದು ಬಹುತೇಕ ನಿಶ್ಚಿತವಾಗಿದೆ. 

ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಮತ್ತು  ಘಟಾನು ಘಟಿಗಳು ಆಡಳಿತ ಪಕ್ಷಗಳಲ್ಲಿ ಇರುವುದರಿಂದ ಅವರನ್ನು ಸಮರ್ಥವಾಗಿ ಎದುರಿಸಲು ಯಡಿಯೂರಪ್ಪ ಅವರೇ ಪ್ರತಿಪಕ್ಷದ ನಾಯಕರಾಗುವುದು ಸೂಕ್ತ ಎಂಬ ನಿಲವಿಗೆ ಪಕ್ಷದ ವರಿಷ್ಠರು ಬಂದಿದ್ದಾರೆ. 

ಈ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿ ಶುಕ್ರವಾರ ವಿಧಾನಸಭೆಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

loader