ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈ ಬಾರಿ ತಾವೇ ಮುಖ್ಯಮಂತ್ರಿಯಾಗುವ ಭರವಸೆ ವ್ಯಕ್ತಪಡಿಸಿದ್ದಾರೆ. ಅದರಂತೆ ತಾವೇ ಮುಖ್ಯಮಂತ್ರಿಯಾಗಿ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲಾಗುವುದು ಎಂದು ವಾಗ್ದಾನ ನೀಡಿದ್ದಾರೆ.

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಈ ಬಾರಿ ತಾವೇ ಮುಖ್ಯಮಂತ್ರಿಯಾಗುವ ಭರವಸೆ ವ್ಯಕ್ತಪಡಿಸಿದ್ದಾರೆ. ಅದರಂತೆ ತಾವೇ ಮುಖ್ಯಮಂತ್ರಿಯಾಗಿ ವಿವಿಧ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಲಾಗುವುದು ಎಂದು ವಾಗ್ದಾನ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿಯಾಗಿ ಮೇ 17 ಅಥವಾ 18ರಂದು ಶಪಥ ಮಾಡಿದ ಕೂಡಲೇ ಹಣಕಾಸಿನ ಇತಿಮಿತಿ ನೋಡಿ ರಾಷ್ಟ್ರೀಕೃತ ಬ್ಯಾಂಕ್, ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಪತ್ರಿಕಾ ಸಂವಾದದಲ್ಲಿ ಮಾತನಾಡಿದ ಅವರು, ಸಾಲ ಮನ್ನಾದಿಂದ ಸರ್ಕಾರಕ್ಕೆ 30 ಸಾವಿರ ಕೋಟಿಯ ಹೊರೆಯಾಗಬಹುದು ಎಂದು ಅಂದಾಜಿಸಲಾಗಿದೆ ಎಂದರು.