ಬಿಜೆಪಿ ಅಭ್ಯರ್ಥಿ ಭೂಸನೂರು ಬಂಧನ, ಬಿಡುಗಡೆ

BJP Candidate Arrest And Release
Highlights

ಸಿಂದಗಿ ಮತಕ್ಷೇತ್ರದ ಮಾದರಿ ಮತ ಪತ್ರಗಳಲ್ಲಿ ಕಾನೂನುಬಾಹಿರವಾಗಿ ಅಭ್ಯರ್ಥಿಗಳ ಕ್ರಮ ಸಂಖ್ಯೆಗಳನ್ನು ತಪ್ಪಾಗಿ ಮುದ್ರಿಸಿ, ಮತದಾರರಲ್ಲಿ ಗೊಂದಲ ಮೂಡಿಸಿದ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಭೂಸನೂರ ಅವರನ್ನು ಪೊಲೀಸರು ಭಾನುವಾರ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. 

ಸಿಂದಗಿ: ಸಿಂದಗಿ ಮತಕ್ಷೇತ್ರದ ಮಾದರಿ ಮತ ಪತ್ರಗಳಲ್ಲಿ ಕಾನೂನುಬಾಹಿರವಾಗಿ ಅಭ್ಯರ್ಥಿಗಳ ಕ್ರಮ ಸಂಖ್ಯೆಗಳನ್ನು ತಪ್ಪಾಗಿ ಮುದ್ರಿಸಿ, ಮತದಾರರಲ್ಲಿ ಗೊಂದಲ ಮೂಡಿಸಿದ ಬಿಜೆಪಿ ಅಭ್ಯರ್ಥಿ, ಶಾಸಕ ರಮೇಶ ಭೂಸನೂರ ಅವರನ್ನು ಪೊಲೀಸರು ಭಾನುವಾರ ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. 

ಚುನಾವಣಾ ಆಯೋಗ ನೀಡಿದ ಮಾದರಿ ಮತಪತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ ಹೆಸರನ್ನು ಮೂರನೇ ಸ್ಥಾನದಲ್ಲಿ ನೀಡಿತ್ತು. ಆದರೆ, ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರು ತಮ್ಮ ಮಾದರಿ ಮತಪತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ೨ನೇ ಸ್ಥಾನಕ್ಕೆ ಹಾಕಿ ಮುದ್ರಿಸಿ ಮತದಾರರಿಗೆ ಹಂಚಿದ್ದರು. 

ಈ ಸಂಬಂಧ ರಮೇಶ ಭೂಸನೂರ ಅವರು ಮಾದರಿ ಮತಪತ್ರಗಳಲ್ಲಿ ಅಭ್ಯರ್ಥಿಗಳ ಕ್ರಮ ಸಂಖ್ಯೆಗಳನ್ನು ತಪ್ಪಾಗಿ ಮುದ್ರಿಸಿ, ಮತದಾರರಿಗೆ ಹಂಚಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಅಭ್ಯರ್ಥಿ ಎಂ.ಸಿ.ಮನಗೂಳಿ ಅವರು ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದ್ದರು. 

ಈ ಸಂಬಂಧ ಸಿಂದಗಿ ಪೊಲೀಸ್  ಠಾಣೆಯಲ್ಲಿ ಶಾಸಕ ರಮೇಶ ಭೂಸನೂರ ವಿರುದ್ಧ ಆರ್‌ಪಿಸಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಾಸಕರನ್ನು ಪೊಲೀಸರು ಬಂಧಿಸಿದ್ದರು.

loader