ಚುನಾವಣಾ ಫಲಿತಾಂಶದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ. 

ವಿಜಯಪುರ : ಚುನಾವಣಾ ಫಲಿತಾಂಶದಲ್ಲಿ ಅಕ್ರಮವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ ಬಬಲೇಶ್ವರದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲಿ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಮುನ್ನಡೆ ಸಾಧಿಸಿದ್ದು, ಮತ ಎಣಿಕೆ ಕಾರ್ಯದಲ್ಲಿ ಸಮಸ್ಯೆಯಾಗಿದೆ ಎಂದು ಬಿಜೆಪಿ ಅಭ್ಯರ್ಥಿ ವಿಜು ಗೌಡ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು. 

ಇಲ್ಲಿ ನಡೆಯುತ್ತಿರುವ ಮತ ಎಣಿಕೆ ಕಾರ್ಯದಲ್ಲಿ ಸಮಸ್ಯೆ ಇದೆ. ಆದ್ದರಿಂದ ತಮಗೆ ಹಿನ್ನಡೆ ಎದುರಾಗಿದೆ ಎಂದು ಆರೋಪಿಸಿದ್ದಾರೆ. 

ಕಾಂಗ್ರೆಸ್ ಮುಖಂಡ ಎಂ.ಬಿ ಪಾಟೀಲ್ ಅತ್ಯಧಿಕ ಮತಗಳ ಅಂತರದಿಂದ ವಿಜು ಗೌಡ ಪಾಟೀಲ್ ಗಿಂತ ಮುನ್ನಡೆ ಸಾಧಿಸಿದ್ದಾರೆ. 

ಈಗಾಗಲೇ ಬಿಜೆಪಿ ಅತ್ಯಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, 92 ಸ್ಥಾನಗಳಲ್ಲಿ ಜಯಗಳಿಸಿದೆ.