ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿಗೆ ಬಿಜೆಪಿ ಗಾಳ

BJP Leader Contact Satish Jarkiholi
Highlights

 ಕರ್ನಾಟಕದಲ್ಲಿ ಸರ್ಕಾರ ರಚನೆಯ ಕಸರತ್ತು ಭರದಿಂದ ಸಾಗಿದ್ದು, ಬಿಎಸ್ ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪ್ರಮುಖ ನಾಯಕರೋರ್ವರಿಗೆ ಬಿಜೆಪಿ ಗಾಳ ಹಾಕಿತ್ತು ಎನ್ನುವ ವಿಚಾರವೊಂದು ಇದೀಗ ಬಹಿರಂಗವಾಗಿದೆ. 

ಬೆಳಗಾವಿ: ಕರ್ನಾಟಕದಲ್ಲಿ ಸರ್ಕಾರ ರಚನೆಯ ಕಸರತ್ತು ಭರದಿಂದ ಸಾಗಿದ್ದು, ಬಿಎಸ್ ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಪ್ರಮುಖ ನಾಯಕರೋರ್ವರಿಗೆ ಬಿಜೆಪಿ ಗಾಳ ಹಾಕಿತ್ತು ಎನ್ನುವ ವಿಚಾರವೊಂದು ಇದೀಗ ಬಹಿರಂಗವಾಗಿದೆ. 

ಎಐಸಿಸಿ  ಕಾರ್ಯದರ್ಶಿ ಸತೀಶ ಜಾರಕಿ ಹೊಳಿ ಅವರನ್ನು ಬಿಜೆಪಿ ಸಂಪರ್ಕಿಸಿದ್ದು, ಅವರು ತಮ್ಮ ನಿರ್ಧಾರ ತಿಳಿಸಿಲ್ಲ ಎಂದು ಅವರ ಆಪ್ತಮೂಲಗಳಿಂದ ತಿಳಿದುಬಂದಿದೆ. 

ಮಾಜಿ ಸಚಿವ ಉಮೇಶ ಕತ್ತಿ ಮತ್ತು ಶ್ರೀರಾಮುಲು ಅವರು ಸತೀಶ ಜಾರಕಿಹೊಳಿ ಅವರ ಸಂಪರ್ಕದಲ್ಲಿದ್ದು, ಸತೀಶ್ ಅವರು ಬೆಂಬಲ ನೀಡಿದರೆ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಪ್ರಮುಖ ಸ್ಥಾನ ದೊರೆಯುವ ಸಾಧ್ಯತೆಗಳಿವೆ. ಕಾಂಗ್ರೆಸ್ ನಾಯಕತ್ವದ ವಿರುದ್ಧ ಮುನಿಸಿಕೊಂಡಿದ್ದ ಸತೀಶ ಈ ಹಿಂದೆಯೇ ಪಕ್ಷ ತೊರೆಯುವ ಸಾಧ್ಯತೆ ದಟ್ಟವಾಗಿದ್ದವು.

loader