ಬಿಜೆಪಿಯಿಂದ ಸಚಿವ ಸ್ಥಾನದ ಆಮಿಷ : ಟಿ.ವೆಂಕಟರಮಣಯ್ಯ

BJP Offer Minister Post To Congress MLA
Highlights

ಸಚಿವ ಸ್ಥಾನ, ಮರು ಚುನಾಚಣೆಗೆ ಅಗತ್ಯ ಇರುವ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡುವುದಾಗಿ ಬಿಜೆಪಿ ಶಾಸಕ ಶ್ರೀರಾಮುಲು ಅವರಿಂದ ಬಂದಿದ್ದ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ (ಮೇ 18) : ಸಚಿವ ಸ್ಥಾನ, ಮರು ಚುನಾಚಣೆಗೆ ಅಗತ್ಯ ಇರುವ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹಣ ನೀಡುವುದಾಗಿ ಬಿಜೆಪಿ ಶಾಸಕ ಶ್ರೀರಾಮುಲು ಅವರಿಂದ ಬಂದಿದ್ದ ಆಹ್ವಾನವನ್ನು ತಿರಸ್ಕರಿಸಿದ್ದೇನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದ್ದಾರೆ. ಪಟ್ಟಣದಲ್ಲಿ ಗುರುವಾರ ಕನ್ನಡಪ್ರಭದೊಂದಿಗೆ ಮಾತನಾಡಿ, ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರು ಸಾಕಷ್ಟು ಹಣ ನೀಡಿದ್ದಾರೆ. 

ನಾನು ಯಾವುದೇ ಆಮಿಷಕ್ಕೆ ಒಳಗಾಗುವ ಮನುಷ್ಯ ಅಲ್ಲ. ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ ನಾನು. ಶಾಸಕ ಶ್ರೀರಾಮುಲು ಅವರು ಕ್ಷೇತ್ರದ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎನ್ನುವ ಬಗ್ಗೆ ವದಂತಿ ಹಬ್ಬಿಸುತ್ತಿದ್ದಾರೆ. ಕ್ಷೇತ್ರದ ಜನ ನನ್ನ ಮೇಲೆ ನಂಬಿಕೆ ಇಟ್ಟು ಮತ ನೀಡಿರುವುದಕ್ಕೆ ಕತಜ್ಞನಾಗಿದ್ದೇನೆ.

ಮತದಾರರ ನಂಬಿಕೆಗೆ ನಿಷ್ಟನಾಗಿರುತ್ತೇನೆ. ಇಂತಹ ವದಂತಿಗಳನ್ನು ಯಾವುದೇ ಕಾರಣಕ್ಕೂ ಜನ ನಂಬಬಾರದು. ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ ಎಂದರು.

loader